ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪ್ರಾಮಾಣಿಕರನ್ನು ಆಯ್ಕೆ ಮಾಡಿ

Rashmi Kasaragodu
Updated On : 1 Mar 2013, 10:45 am

ಚಿಕ್ಕಮಗಳೂರು: ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಪ್ರಾಮಾಣಿಕವಾಗಿ ಆಡಳಿತ ನಡೆಸುವ ಜನ ಪ್ರತಿನಿಧಿಗಳು ಹೊರಹೊಮ್ಮಲು ಚುನಾವಣೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ.
ನಗರದ ಮಾರ್ಕೆಟ್ ರಸ್ತೆಯಲ್ಲಿ ಜಾತ್ಯತೀತ ಜನತಾದಳದ ಚುನಾವಣಾ ಪ್ರಚಾರ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ನಗರಸಭೆ ಚುನಾವಣೆಗಳಿಗೆ ಎಲ್ಲಾ ಜಾತಿ, ವರ್ಗದವರನ್ನು ಗಣನೆಗೆ ತೆಗೆದುಕೊಂಡು ಸ್ಪರ್ಧಿಸಲು ಇಚ್ಚಿಸಿದ್ದ ಆಕಾಂಕ್ಷಿಗಳನ್ನು ಪರಸ್ಪರ ಸಭೆ ಸೇರಿಸಿ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ ಎಂದರು.
ರಾಜ್ಯ ಯುವ ಘಟಕದ ಕಾರ್ಯಾಧ್ಯಕ್ಷ ಸಿ.ಎನ್. ಅಕ್ಮಲ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡಿ ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುವಲ್ಲಿ ಈ ಪಕ್ಷಗಳ ನಗರಸಭೆ ಸದಸ್ಯರು ಮೇಲುಗೈ ಸಾಧಿಸಿದ್ದಾರೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಮಂಜಪ್ಪ, ನಗರ ಯುವ ಘಟಕದ ಕಾರ್ಯಾಧ್ಯಕ್ಷ ಜಾಹಿರ್, ವಾರ್ಡ್ ಅಧ್ಯಕ್ಷ ಶಾಹಿದ್, ಅಭ್ಯರ್ಥಿಗಳಾದ ತ್ರಿವೇಣಿ, ಜಾವಿದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement