ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತದಾರರ ಹೆಸರು ನಾಪತ್ತೆ: ಪ್ರತಿಭಟನೆ

Rashmi Kasaragodu
Updated On : 1 Mar 2013, 10:45 am

ಚಿಕ್ಕಮಗಳೂರು: ನಗರದ ಕೆಲವು ವಾರ್ಡ್ಗಳಲ್ಲಿ ಮತದಾರರ ಹೆಸರನ್ನು ಕೈಬಿಟ್ಟಿರುವುದನ್ನು ಖಂಡಿಸಿ ಕೆಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಕೆಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಚ್. ದೇವರಾಜ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ವೀಣಾ ಹಾಗೂ ಜಿಲ್ಲಾಧಿಕಾರಿ ವಿ. ಯಶವಂತ್ ಅವರಿಗೆ ಮನವಿ ಸಲ್ಲಿಸಿ ಕೈ ಬಿಟ್ಟಿರುವ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು.
ನಗರದ 20. 21, 23 ಸೇರಿದಂತೆ ಇತರೆ ವಾರ್ಡ್ಗಳಲ್ಲಿ ಮತದಾರರ  ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ. ಅದುದರಿಂದ ಕೈಬಿಟ್ಟ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು.
ಕೈಗೊಂಬೆಯಾಗಬೇಡಿ:  ತಾಲೂಕು ಕಚೇರಿ ಆವರಣದಲ್ಲಿ ಮಾತನಾಡಿದ ಎಚ್.ಎಚ್. ದೇವರಾಜ್, ನಗರಸಭೆ ಚುನಾವಣೆಯಲ್ಲಿ ಅಧಿಕಾರಿಗಳು ನಿಸ್ಪಕ್ಷಪಾತದಿಂದ ಕೆಲಸ ಮಾಡಬೇಕೇ ಹೊರತು ಆಡಳಿತ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡಬಾರದು ಎಂದು ಕಿವಿ ಮಾತು ಹೇಳಿದರು.
ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಿಸ್ಪಕ್ಷಪಾತವಾಗಿ ನಡೆಯಬೇಕು. ಜಿಲ್ಲೆಯ ಇಬ್ಬರು ಮಂತ್ರಿಗಳು ಸೋಲಿನ ಹತಾಶೆಯಿಂದ ಅಧಿಕಾರಿಗಳನ್ನು ಕೈಗೊಂಬೆ ಮಾಡಿಕೊಂಡು ಮತದಾರರ ಪಟ್ಟಿಯಲ್ಲಿರುವ ಹೆಸರನ್ನು ಕೈಬಿಟ್ಟಿದ್ದಾರೆಂದು ಆರೋಪಿಸಿದ್ದಾರೆ.
ಮತದಾರರ ಪಟ್ಟಿಗೆ ಸೇರಿಸಿ: ಬಿಜೆಪಿ ಚುನಾವಣೆಯನ್ನು ಎದುರಿಸದೆ ಸೋಲಿನ ಭೀತಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೋಲೆ ಮಾಡಿದೆ. ಚುನಾವಣಾಧಿಕಾರಿಗಳು ತಕ್ಷಣವೇ ಕೈಬಿಟ್ಟಿರುವ ಮತದಾರರ ಪಟ್ಟಿಯನ್ನು ಮತ್ತೆ ಸೇರಿಸಿ ಚುನಾವಣೆಯನ್ನು ಉತ್ತಮ ರೀತಿಯಲ್ಲಿ ನಡೆಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ಲೊಕೇಶ್ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕೆಜೆಪಿ ಪಕ್ಷದ ಮತದಾರರ ಹೆಸರನ್ನು ಉದ್ದೇಶ ಪೂರ್ವಕವಾಗಿ ಕೈಬಿಟ್ಟಿದ್ದಾರೆ ಎಂದರು.
ಚುನಾವಣಾಧಿಕಾರಿಗಳಾದ ತಹಸೀಲ್ದಾರ್ ವೀಣಾ ರವರೊಂದಿಗೆ ಕೈಬಿಟ್ಟ ಮತದಾರರ ಬಗ್ಗೆ ಚರ್ಚಿಸಿದಾಗ ಬಿಜೆಪಿಯ ಮಹಿಳಾ ಮೊರ್ಚಾದರಂತೆ ವರ್ತಿಸಿ, ಉಡಾಫೆ ಉತ್ತರ ನೀಡಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಕೆಜೆಪಿ ಮುಖಂಡರಾದ ದಿನೇಶ್, ಜಮೀಲ್ ಅಹಮ್ಮದ್, ಹರೀಶ್, ರವಿಕುಮಾರ್ ಹಾಗೂ  ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement