ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರೋಗಿಗಳಿಗೆ 4 ಕೋಟಿ ನೆರವು

Rashmi Kasaragodu
Updated On : 1 Mar 2013, 10:44 am

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 800 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 4 ಕೋಟಿಗೂ ಹೆಚ್ಚು ನೆರವು ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಅವರು ಬುಧವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ಅನಾರೋಗ್ಯ ಪೀಡಿತರ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿ ನಂತರ ಮಾತನಾಡಿದರು.
ಮೂತ್ರಪಿಂಡ ವೈಪಲ್ಯ, ಕ್ಯಾನ್ಸರ್ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ಮತ್ತು ಅನಾರೋಗ್ಯ ಪೀಡಿತರಿಗೆ ನೆರವು ನೀಡಿ ಕಾಯಿಲೆ ಗುಣಮುಖಕ್ಕೆ ಸಹಕರಿಸಲಾಗಿದೆ. ಅವರಿಂದ ಯಾವುದೆ ಪ್ರತಿಫಲಾಪೇಕ್ಷೆ ಬಯಸದೆ ಮಾನವೀಯತೆ ನೆಲೆಯಲ್ಲಿ ಈ ಕಾರ್ಯಕ್ಕೆ ಮುಂದಾಗಲಾಗಿದೆ ಎಂದರು.
ಎಪಿಎಂಸಿ ಅಧ್ಯಕ್ಷ ಬೆಳವಾಡಿ ರವೀಂದ್ರ, ತಾಲೂಕು ಪಂಚಾಯಿತಿ ಅಧ್ಯಕ್ಷ ಬಸವರಾಜು, ಸಿಡಿಎ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement