ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಟನ್ ಮಾರ್ಕೆಟ್‌ನಿಂದ ನಿಲ್ದಾಣದವರೆಗೆ ಡಾಂಬರೀಕರಣ

Lingaraj Badiger
Updated On : 21 Jan 2013, 12:00 pm

ಮೂಡಿಗೆರೆ: ಕಳೆದ ಒಂದು ವಾರದಿಂದ ಲೋಕೋಪಯೋಗಿ ಇಲಾಖೆ ಮೂಡಿಗೆರೆ ಪಟ್ಟಣದ ಹ್ಯಾಂಡ್‌ಪೋಸ್ಟ್‌ನಿಂದ ಗಂಗನಮಕ್ಕಿ ಗಣಪತಿ ದೇವಾಲಯ ಹಾಗೂ ಮಟನ್ ಮಾರ್ಕೆಟ್‌ನಿಂದ ಬಸ್ ನಿಲ್ದಾಣದವರೆಗೆ ಗುಂಡಿ ಮುಚ್ಚುವ ಮತ್ತು ಮರು ಡಾಂಬರೀಕರಣ ಮಾಡಲಾಗುತ್ತಿದೆ. ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದಿಂದ ರು. 87 ಕೋಟಿ ಬಿಡುಗಡೆಯಾಗಿದೆ. ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ ಎಂದರು.
ರು. 5.5 ಕೋಟಿ ವೆಚ್ಚದಲ್ಲಿ ಚೀಕನಹಳ್ಳಿ- ಗೌತವಳ್ಳಿ- ಮೂಡಿಗೆರೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಾರಂಭವಾಗಿದೆ. ನಕ್ಸಲ್ ಪ್ಯಾಕೇಜ್ ರು. 5 ಕೋಟಿ ಬಿಡುಗಡೆ ಮಾಡಿದ್ದು ಅದನ್ನು ಸಮರ್ಪಕವಾಗಿ ಬಳಸಲಾಗುವುದು ಎಂದರು.
ಪಟ್ಟಣ ಪಂಚಾಯತ್ ಅಧ್ಯಕ್ಷೆ ಲತಾಲಕ್ಷ್ಮಣ್, ಎಪಿಎಂಸಿ ಸದಸ್ಯ ಲಕ್ಷ್ಮಣ್ ಶೆಟ್ಟಿ, ವರ್ತಕರು ಹಾಗೂ ಕಾಫಿ ಬೆಳೆಗಾರರಾದ ಎಂ.ಸಿ. ಗೋಪಾಲ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement