ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜೆಡಿಯು ಜಿಲ್ಲಾಧ್ಯಕ್ಷ ರಾಜಿನಾಮೆ

Lingaraj Badiger
Updated On : 24 Jan 2013, 10:56 am

ಚಿಕ್ಕಮಗಳೂರು: ಜೆಡಿಯು ಜಿಲ್ಲಾಧ್ಯಕ್ಷ ಕೆ. ಭರತ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಜಿಲ್ಲಾ ಘಟಕವನ್ನು ವಿಸರ್ಜಿಸಿ ತಮ್ಮ ಸ್ಥಾನಕ್ಕೆ ನೀಡಿರುವ ರಾಜಿನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಎಂ.ಪಿ. ನಾಡಗೌಡ ಅವರಿಗೆ ಸಲ್ಲಿಸಲಾಗಿದೆ ಎಂದು ಕೆ. ಭರತ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಎರಡು ವರ್ಷಗಳಿಂದ ಸಂಯುಕ್ತ ಜನತಾದಳ ಪಕ್ಷ ಕಟ್ಟಿ ಬೆಳೆಸಲಾಗಿದೆ. ಪಕ್ಷದ ಮುಖಂಡರು ತಮಗೂ ಸೇರಿದಂತೆ ಹಲವರಿಗೆ ಸಹಕಾರವನ್ನು ನೀಡಿದ್ದಾರೆ. ತಮ್ಮನ್ನು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದ ಪಕ್ಷದ ಮುಖಂಡರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.
ಬಿಎಸ್‌ಆರ್ ಪಕ್ಷದಿಂದ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲಾಗುವುದು, ಮುಂದಿನ ವಾರ ನಗರದಲ್ಲಿ ಪಕ್ಷದ ಕಚೇರಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಿ.ಎಸ್. ದ್ವಾರಕನಾಥ್ ನಗರಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಸೇರಿದಂತೆ ಇನ್ನಿತರೆ ಕಾರ್ಯಗಳು ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ವಾಜಿದ್, ತಂಬಿಯನ್, ವಿಜಯ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement