ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಸಾಂಪ್ರದಾಯಿಕ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆ'

Lingaraj Badiger
Updated On : 28 Jan 2013, 11:20 am

ಶೃಂಗೇರಿ: ಇತ್ತಿಚ್ಚಿನ ದಿನಗಳಲ್ಲಿ ಜನರಲ್ಲಿ ಸಾಂಪ್ರದಾಯಿಕ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾ ಮನೋಭಾವನೆ ಕುಂಠಿತಗೊಳ್ಳುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಕೆ. ಸತೀಶ್ ಅಭಿಪ್ರಾಯಪಟ್ಟರು.
ಅವರು ಭಾನುವಾರ ಪಟ್ಟಣದ ಗೌರಿ ಶಂಕರ ಸಭಾಂಗಣದಲ್ಲಿ ತುಂಗಾ ಸ್ಪೋರ್ಟ್ ಕ್ಲಬ್ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಷಟಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಗಳು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದು ಮಾನಸಿಕ, ದೈಹಿಕ ಸದೃಢತೆ ಬೆಳವಣಿಗೆಗೆ ಪೂರಕವಾಗಿದೆ. ಇಂತಹ ಪಂದ್ಯಾವಳಿಗಳು ಮಕ್ಕಳು ಮತ್ತು ಯುವಜನತೆಯನ್ನು ಆಕರ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement