ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕನ್ನಡ ಸಂಸ್ಕೃತಿ ಇಲಾಖೆಗೆ ನಿವೇಶನ ನೀಡಲು ತೀರ್ಮಾನ

Lingaraj Badiger
Updated On : 1 Feb 2013, 11:03 am

ನರಸಿಂಹರಾಜಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ರಾಜೀವ ನಗರ ಬಡಾವಣೆಯಲ್ಲಿ ನಿವೇಶನ ನೀಡಲು ಪಪಂ ಸಾಮಾನ್ಯ ಸಭೆ ತೀರ್ಮಾನಿಸಿದೆ.
 ಬುಧವಾರ ಪಪಂ ಅಧ್ಯಕ್ಷೆ ರುಕ್ಮುಣಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಾಗ ನಿವೇಶನ ನೀಡಲು ಸಭೆ ಒಪ್ಪಿಗೆ ನೀಡಿತು.
ಉದ್ಯಾನವನಕ್ಕೆ ಜಾಗ: ಈ ಸಂದರ್ಭದಲ್ಲಿ ಪಪಂ ಸದಸ್ಯ ಬಿ.ಎಸ್. ಆಶೀಶ್ ಕುಮಾರ್ ಮಾತನಾಡಿ, ರಾಜೀವ ನಗರ ಬಡಾವಣೆಯಲ್ಲಿ ಉದ್ಯಾನವನ ನಿರ್ಮಿಸಲು ಜಾಗ ಉಳಿಸಿಕೊಂಡು ಉಳಿದ ಜಾಗವನ್ನು ಕನ್ನಡ, ಸಂಸ್ಕೃತಿ ಇಲಾಖೆಗೆ ನೀಡೋಣ ಎಂದು ಸಲಹೆ ನೀಡಿದರು.
  ತುರ್ತು ಕಾಮಗಾರಿಗಳನ್ನು ಕೈಗೊಳ್ಳುವ ವಿಚಾರ ಚರ್ಚೆಗೆ ಬಂದಾಗ ಬೇಸಿಗೆಯಲ್ಲಿ ಪಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅದರ ಪರಿಹಾರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸದಸ್ಯರು ಸಲಹೆ ನೀಡಿದರು.
ಹಾಳಾದ ಪಂಪ್: ಪಟ್ಟಣದ ಮೇದರಬೀದಿಯಲ್ಲಿ ಕುಡಿಯುವ ನೀರಿನ ಪಂಪ್ ಹಾಳಾಗಿದೆ. ತುರ್ತಾಗಿ ರಿಪೇರಿ ಮಾಡಬೇಕು ಎಂದು ಸದಸ್ಯರು ಆಗ್ರಹಿಸಿದರು. ಬಸ್ಸು ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಅದಕ್ಕೆ ಆದ್ಯತೆ ನೀಡಬೇಕು. ಬಡವರ ಕಲ್ಯಾಣ ನಿಧಿ ಯೋಜನೆಯಲ್ಲಿ ಪಟ್ಟಣದ ವಾಟರ್ ಟ್ಯಾಂಕ್ ಸಮೀಪದಲ್ಲಿ ನಿರ್ಮಿಸಿರುವ ಮಳಿಗೆಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಇಲ್ಲ. ಜೊತೆಗೆ ವಿದ್ಯುತ್ ವೋಲ್ಟೇಜ್ ಕೂಡಾ ಕಡಿಮೆ ಇದೆ. ಇದನ್ನು ಸರಿಪಡಿಸಬೇಕು ಎಂದು ಸದಸ್ಯ ಜಯರಾಂ ಸಲಹೆ ನೀಡಿದರು.
   ಪಪಂ ಅಧ್ಯಕ್ಷೆ ರುಕ್ಮಣಿ ಸುರೇಶ್ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement