ನಾಳೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ
ಶೃಂಗೇರಿ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶನಿವಾರ ತಾಲೂಕಿನ ವಿದ್ಯಾರಣ್ಯಪುರ ಪಂಚಾಯಿತಿ ದುರ್ಗಾದೇವಸ್ಥಾನದಲ್ಲಿ ನಡೆಯಲಿದೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜೀವರಾಜ್ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ತಾಪಂ ಅಧ್ಯಕ್ಷೆ ಶಾರದಾ ವಿಶ್ವನಾಥ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.