ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಬಿಜೆಪಿ ಬಿಟ್ಟು ಬೇರೆ ಪಕ್ಷದತ್ತ ಗಮನವಿಲ್ಲ'

Lingaraj Badiger
Updated On : 2 Jul 2013, 10:40 am

ಕಡೂರು: ತಾವು ಬಿಜೆಪಿಯಿಂದಲೇ ರಾಜಕೀಯ ಆರಂಭಿಸಿದ್ದು, ಮುಂದೆಯೂ ಬಿಜೆಪಿಯಿಂದಲೇ  ರಾಜಕೀಯ ಜೀವನ ಮುಂದುವರಿಸುತ್ತೇನೆಯೇ ಹೊರತು ಬೇರಾವುದೇ ಪಕ್ಷಗಳಿಗೆ ಹೋಗುವುದಿಲ್ಲ ಎಂದು ಜಿ ಪಂ ಸದಸ್ಯೆ ಪದ್ಮಾ ಚಂದ್ರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕೆಲ ದಿನಗಳ ಹಿಂದೆ ಪದ್ಮಾ ಚಂದ್ರಪ್ಪನವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ನನ್ನ ರಾಜಕೀಯ ಜೀವನವನ್ನು ಬಿಜೆಪಿಯಿಂದಲೇ ಆರಂಭಿಸಿದ್ದು, ಕಳೆದ ಜಿಪಂ ಚುನಾವಣೆಯಲ್ಲೂ ಬಿಜೆಪಿ ಸದಸ್ಯಳಾಗಿ ಆಯ್ಕೆಯಾಗಿ ಜನರ ಸೇವೆ ಮಾಡುತ್ತಾ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುತ್ತಿದ್ದೇನೆ ಎಂದರು. ನಮ್ಮ ಬಿಜೆಪಿ ನಾಯಕರು ಅಂದು ನನ್ನನ್ನು ಜಿಪಂ ಸದಸ್ಯಳಾಗಿ ಆಯ್ಕೆ ಮಾಡಲು ಶ್ರಮಿಸಿದ್ದು, ಅವರ ಋಣ ನನ್ನ ಮೇಲಿದೆ. ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ. ಪ್ರಾಣೇಶ್ ಅವರ ಗಮನಕ್ಕೂ ತರುವ ಮೂಲಕ ಸ್ಪಷ್ಟನೆ ನೀಡಬಯಸುತ್ತೇನೆ. ಇದರಿಂದ ನಮ್ಮ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement