ಸಾಹಿತ್ಯ ಪರೀಕ್ಷೆ: ಅರ್ಜಿ ಆಹ್ವಾನ
ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2013-14 ನೇ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸಂಯೋಜಿಸುತ್ತಿದೆ. ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಈ ನಾಲ್ಕು ಪರೀಕ್ಷೆಗಳನ್ನು ಕುರಿತಂತೆ ಅರ್ಜಿ ಫಾರಂ ಮತ್ತು ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳಿಗಾಗಿ ನೇರವಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯದಿನ, 30 ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 15ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷಾರ್ಥಿಗಳು ಸಾಹಿತ್ಯ ಪರೀಕ್ಷೆಗಳ ಅರ್ಜಿಗಾಗಿ 15 ನೇರವಾಗಿ ಕನ್ನಡ ಸಾಹಿತ್ಯ ಪರಿಷತ್ತು. ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು ಇವರಿಗೆ ಮನಿಯಾರ್ಡರ್ ಮೂಲಕ ಕಳುಹಿಸಿ ಪಡೆಯಬಹುದಾಗಿದೆ.