'7ರಂದು ಮತದಾರರಿಗೆ ಕೃತಜ್ಞತೆ'
ಕಡೂರು: ಜು. 7ರಂದು ಭಾನುವಾರ ಕಡೂರು ಪಟ್ಟಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಕಡೂರು ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಅರ್ಪಿಸುವ ಕಾರ್ಯಕ್ರಮ ನಡೆಯಲಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಶಾಸಕ ವೈ.ಎಸ್.ವಿ. ದತ್ತ, ಜು.7 ರಂದು ಬೆಳಿಗ್ಗೆ 10.30ಕ್ಕೆ ಕಡೂರು ಪಟ್ಟಣದ ಕೆ. ಎಲ್.ವಿ. ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ
ವೇದಿಕೆಯಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಮಾಜಿ ಪ್ರಧಾನಿ ಹಾಗು ಹಾಸನ ಲೋಕಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡರು ಅಭಿನಂದನೆ ಅರ್ಪಣೆ ಮಾಡಲಿದ್ದಾರೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹಾಗು ಶಾಸಕರಾದ ಹೆಚ್.ಡಿ.ರೇವಣ್ಣನವರು ಭಾಗವಹಿಸಲಿದ್ದಾರೆ. ಕ್ಷೇತ್ರದ ಮತದಾರ ಬಂಧುಗಳು,ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ದತ್ತ ಮನವಿ ಮಾಡಿದ್ದಾರೆ.