ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಳೆಯ ರುದ್ರನರ್ತನ: ಗುಡ್ಡ ಕುಸಿತ

Mainashree
Updated On : 4 Jul 2013, 11:28 am

ಶೃಂಗೇರಿ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮಂಗಳವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
  ಈಗಾಗಲೇ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿದ್ದು,  ಕೆಲವೆಡೆ ರಸ್ತೆಯ ಮೇಲೆ ನದಿಯ ನೀರು ನುಗ್ಗಿ ಹರಿಯುತ್ತಿರುವು ದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ ಪ್ರದೇಶದ ಹಲವೆಡೆ ಕಾಲುವೆ, ಹಳ್ಳಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವುದರಿಂದ ಕಿರು ಸೇತುವೆ, ಮೋರಿಗಳ ಮೇಲೆ ನೀರು ತುಂಬಿ ಹರಿಯುತ್ತಿದ್ದು ಸಂಪರ್ಕ ಕಡಿತಗೊಂಡಿದೆ. ಗೆದ್ದೆಗಳಲ್ಲಿ ನೀರು ನುಗ್ಗಿದ್ದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನೆಡೆಯಾಗಿದ್ದು ಕೆಲವೆಡೆ ತೀವ್ರ ಪ್ರಮಾಣದಲ್ಲಿ ಹಾನಿಯಾಗಿವೆ. ಕಾಲುವೆ ದಂಡೆಗಳು ಒಡೆದ ಬಗ್ಗೆಯು ವರದಿಯಾಗಿದೆ.ಧಾರಾಕಾರ ಗಾಳಿ ಮಳೆಯಿಂದ ಮರಗಳು ಧರೆಗುರುಳಿವೆ. ಇನ್ನು ಕೆಲವೆಡೆ ಸತತ ಮಳೆಯಿಂದ ಗುಡ್ಡ ಕುಸಿತದಿಂದ ಮನೆಗಳಿ ಹಾನಿಯುಂಟಾಗಿದೆ. ನಿರಂತರ ಮಳೆಯಿಂದಾಗಿ ತಂಗಾ ನದಿಯಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಈಗಾಗಲೇ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನೀರಿನ ಪ್ರಮಾಣ ಹೆಚ್ಚಾಗತೊಡಗಿದೆ. ಇದೇ ರೀತಿ ಮಳೆಯ ತೀವ್ರತೆ ಹೆಚ್ಚಾಗತೊಡಗಿದ್ದರೆ ಪ್ರವಾಹದ ಭೀತಿ ಎದುರಾಗುವ ಸಾಧ್ಯತೆಯಿದೆ. ಬುಧವಾರ ಬೆಳಿಗ್ಗೆಯಿಂದಲೇ ಮಳೆ ಆರ್ಭಟ ಮುಂದುವರೆದಿತ್ತು. ಧಾರಾಕಾರ ಮಳೆ ಭೀಳುತ್ತಿರುವುದರಿಂದ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement