ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಾನವ ಸಂಪನ್ಮೂಲ ಅಭಿವೃದ್ಧಿ ಕುರಿತ ಕಾರ್ಯಾಗಾರ

Mainashree
Updated On : 4 Jul 2013, 11:27 am

ಕ.ಪ್ರ.ವಾರ್ತೆ  ಶೃಂಗೇರಿ   ಜು.3
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಕುರಿತ ತರಬೇತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮಾವಿನಕಾಡು ರಂಗನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಿಬಿರಾರ್ಥಿಗಳು ತರಬೇತಿ ಕಾರ್ಯಾಗಾರಗಳ ಸದುಪಯೋಗಪಡೆದುಕೊಳ್ಳಬೇಕು. ಕಾರ್ಯಾಗಾರಗಳಲ್ಲಿನ ಉತ್ತಮ ಚರ್ಚೆ, ಸಂವಾದಗಳ ಅಂಶಗಳನ್ನು ಅಳವಡಿಸಿಕೊಳ್ಳಬೇಕು, ಇಂತಹ ಶಿಬಿರಗಳು ಬಹಳ ಉಪಯುಕ್ತವಾಗಿವೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಶಾರದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಸುಬ್ಬರಾವ್ ಸೇರಿದಂತೆ ತಾಲೂಕು ಪಂಚಾಯಿತಿ ಸದಸ್ಯ, ಅಧಿಕಾರಿಗಳು ಉಪಸ್ಥಿತರಿದ್ದರು.
ಆರೋಗ್ಯ, ಶಿಕ್ಷಣ ಸೇರಿಂದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement