ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

Mainashree
Updated On : 4 Jul 2013, 11:27 am

ನರಸಿಂಹರಾಜಪುರ: ಕೃಷಿ ಇಲಾಖೆಯ 2013-14 ನೇ ಸಾಲಿನ ಭೂ ಚೇತನ ಯೋಜನೆಯಡಿ ರೈತ ಕ್ಷೇತ್ರ ಪಾಠ ಶಾಲೆಯ ಉದ್ಘಾಟನೆ ಕಾರ್ಯಕ್ರಮ ಮಡೋಡಿ ಸಮುದಾಯ ಭವನದಲ್ಲಿ ಬುಧವಾರ ನಡೆಯಿತು.
ಕಾನೂರು ಗ್ರಾಪಂ ಸದಸ್ಯ ಎಂ.ಸಿ.ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಚೇತನ ಕಾರ್ಯಕ್ರಮ ಯೋಜನೆಯಡಿ ಹಮ್ಮಿಕೊಂಡಿದ್ದ ರೈತ ಕ್ಷೇತ್ರ ಪಾಠ ಶಾಲೆಯ ಕಾರ್ಯಕ್ರಮಗಳಲ್ಲಿ ರೈತರು ಭಾಗವಹಿಸಿ ಉಪಯುಕ್ತ ಮಾಹಿತಿ ಪಡೆಯುವಂತೆ ಕರೆ ನೀಡಿದರು. ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ವಿ.ಎಸ್. ಶಿವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಭೂ ಚೇತನ ಯೋಜನೆಯಡಿ ರೈತರಿಗೆ ಸಿಗುವ ಸೌಲಭ್ಯಗಳು ಹಾಗೂ ರೈತ ಕ್ಷೇತ್ರ ಪಾಠಶಾಲೆಗಳನ್ನು ನಡೆಯುವ ಉದ್ದೇಶವನ್ನು ವಿವರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೃಷಿಕ ಕೃಷ್ಣೇಗೌಡ ಮಾತನಾಡಿ, ರೈತ ಕ್ಷೇತ್ರ ಪಾಠಶಾಲೆಯಲ್ಲಿ ಕೃಷಿ ಇಲಾಖೆ  ಅಧಿಕಾರಿಗಳು ರೈತರಿಗೆ ಬೇಕಾದ ತಾಂತ್ರಿಕ ಮಾಹಿತಿ ನೀಡುತ್ತಿದ್ದಾರೆ. ಕೃಷಿ ಅಧಿಕಾರಿಗಳು ತಿಳಿಸಿದ ಮಾಹಿತಿಯನ್ನು ಪಡೆದು ವೈಜ್ಞಾನಿಕವಾಗಿ ಕೃಷಿ ಮಾಡಿದರೆ ಕೃಷಿ ಲಾಭದಾಯಿಕವಾಗಲಿದೆ ಎಂದರು. ಸಂಪನ್ಮೂಲ ವ್ಯಕ್ತಿ ಶಿವಮೂರ್ತಿ ತರಬೇತಿ ನೀದರು. ಅರುಣ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement