ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಮಕ್ಕಳ ವಿದ್ಯೆಗೆ ಕಾಳಜಿ ವಹಿಸಿ'

Lingaraj Badiger
Updated On : 5 Jul 2013, 11:18 am

ಕ.ಪ್ರ.ವಾರ್ತೆ, ತರೀಕೆರೆ,  ಜು.4
ಮಕ್ಕಳ ವಿದ್ಯೆ ಬಗ್ಗೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು ಎಂದು  ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಸರ್ವ ಶಿಕ್ಷಣ ಅಭಿಯಾನ, ಸಾ.ಶಿ.ಇ. ಮನೋವಿಕಾಸ ಕಾರ್ಪೋರೇಶನ್ ಹುಬ್ಬಳ್ಳಿಯಿಂದ ಪಟ್ಟಣದ ಸ. ಹಿ.ಪ್ರಾ.ಶಾಲೆ ಅವರಣದಲ್ಲಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ವೈದ್ಯಕೀಯ ಮೌಲ್ಯಾಂಕನ ಶಿಬಿರ, ವಿವಿಧ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶ್ರವಣ ದೋಷ, ದೃಷ್ಟಿ ದೋಷ, ಅಂಗ ವಿಕಲತೆ ಇತ್ಯಾದಿ ದೋಷ ಇರುವ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು ಎನ್ನುವ ಹಿನ್ನೆಲೆಯಲ್ಲಿ, ಶಿಬಿರದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. 6 ರಿಂದ 14 ವರ್ಷ ವಯಸ್ಸಿನ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯಬೇಕು. ಶೇ.100 ಎಲ್ಲರೂ ವಿದ್ಯಾವಂತರಾಗಬೇಕು  ಗೃಹಾಧಾರಿತ ಶಿಕ್ಷಣ ವ್ಯವಸ್ಥೆಯಲ್ಲಿ ಇನ್ನೂ ಹೆಚ್ಚು ಮಕ್ಕಳನ್ನು ಗುರುತಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಎಲ್ಲ ಮಕ್ಕಳಿಗೂ ವಿದ್ಯೆ ದೊರಕುವಂತಾಗಬೇಕು ಎಂದು ತಿಳಿಸಿದರು.
ಸತ್ಪ್ರಜೆಯನ್ನಾಗಿ ಮಾಡಿ: ಮಕ್ಕಳ ವಿದ್ಯೆ ಬಗ್ಗೆ ಪೋಷಕರು ಹೆಚ್ಚು ಕಾಳಜಿ ವಹಿಸಬೇಕು, ಒಳ್ಳೆಯ ಶಿಕ್ಷಣ ಕೊಡಿಸಿ  ಮಕ್ಕಳನ್ನು ಸತ್ಪ್ರಜೆಯನ್ನಾಗಿ ಮಾಡಬೇಕು ಎಂದು ಅವರು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ಪರಮೇಶ್ವರಪ್ಪ ಮಾತನಾಡಿ, ಎಲ್ಲಾ ಮಕ್ಕಳನ್ನು ಶಾಲೆಗೆ ಕರೆತರುವ ಯೋಜನೆಯಲ್ಲಿ, ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕಿನಲ್ಲಿ 400 ವಿಕಲಚೇತರನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಅನುಕಂಪಕ್ಕಿಂತ ಅವಕಾಶ ಅಗತ್ಯ: ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಿಮ್ಮಯ್ಯ ಮಾತನಾಡಿ, ಸಾಮಾನ್ಯ ಮಕ್ಕಳ ಜೊತಗೆ ವಿಶೇಷ ಅಗತ್ಯವುಳ್ಳ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು. ಅಂತಹ ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಅಗತ್ಯ, ತಾಲೂಕಿನಲ್ಲಿ 434 ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಮತ್ತು 10 ಗೃಹಾಧಾರಿತ ಮಕ್ಕಳನ್ನು ಗುರುತಿಸಿ ಅವರಿಗೂ ಸರ್ವ ಶಿಕ್ಷಣ ಅಭಿಯಾನ ಯೋಜನೆಯಲ್ಲಿ ಶಿಕ್ಷಣ ನೀಡಲಾಗುತ್ತಿದೆ ಎಂದು ತಿಳಿಸಿದರು.
ಡಾ.ಅನುಷಾ, ಮಹಲಿಂಗಪ್ಪ, ಉಮೇಶ್, ಹೊನ್ನಲಿಂಗಪ್ಪ, ಶಿವಸ್ವಾಮಿ, ಶಾಲಾ ಶಿಕ್ಷಕರು, ಮಕ್ಕಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಶಿವಮೂರ್ತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement