ಇಂದು ಪತ್ರಿಕಾ ದಿನಾಚರಣೆ
ತರೀಕೆರೆ: ಕರ್ನಾಟಕ ಪತ್ರಿಕಾ ಶಕ್ತಿ ಕೇಂದ್ರ ತರೀಕೆರೆ ವತಿಯಿಂದ ಜು.6 ರಂದು ಸಂಜೆ 4 ಗಂಟೆಗೆ ತಾಪಂ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಏರ್ಪಡಿಸಲಾಗಿದೆ. ಶಾಸಕ ಜಿ.ಎಚ್. ಶ್ರೀನಿವಾಸ್ ಸಮಾರಂಭ ಉದ್ಘಾಟನೆ ನೆರವೇರಿಸಲಿದ್ದು, ಕರ್ನಾಟಕ ಶಕ್ತಿ ಕೇಂದ್ರದ ಅಧ್ಯಕ್ಷ ಬಿ. ಕೃಷ್ಣಾನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಬಿ. ತಿಪ್ಪೇರುದ್ರಪ್ಪ ಅವರು ಉಪನ್ಯಾಸ ನೀಡಲಿದ್ದು, ಕರ್ನಾಟಕ ಪತ್ರಿಕಾ ಶಕ್ತಿ ಕೇಂದ್ರದ ರಾಜ್ಯಾಧ್ಯಕ್ಷ ಸುಮನ್ ಪ್ರಶಾಂತ್, ರಾಜ್ಯ ಉಪಾಧ್ಯಕ್ಷ ಬಿ.ವಿ. ನಾಗರಾಜ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಶಾಸಕ ಜಿ.ಎಚ್. ಶ್ರೀನಿವಾಸ್, ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಡಿವೈಎಸ್‌ಪಿ ಸದಾನಂದ್ ಬಿ.ನಾಯಕ್, ತಾಪಂ ಅಧ್ಯಕ್ಷೆ ಶಾಂತ ಗುರುಮೂರ್ತಿ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.