ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವೈದ್ಯರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

Lingaraj Badiger
Updated On : 6 Jul 2013, 10:59 am

ಕ.ಪ್ರ.ವಾರ್ತೆ, ಮೂಡಿಗೆರೆ, ಜು.5
ಪಟ್ಟಣದ ಸರ್ಕಾರಿ ಸಾರ್ವಜನಿಕ ಎಂಜಿಎಂ ಆಸ್ಪತ್ರೆಗೆ ಅಗತ್ಯವಿರುವಷ್ಟು ವೈದ್ಯರನ್ನು ನೇಮಿಸಬೇಕು ಎಂದು ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಆಸ್ಪತ್ರೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಆರೋಗ್ಯಧಿಕಾರಿಗೆ ಮನವಿ ಸಲ್ಲಿಸಿದರು.  
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಬಿಳಗುಳ ಮಾತನಾಡಿ, ತಾಲೂಕಿನಲ್ಲಿ ಕೂಲಿಕಾರರು ಬಡವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ನಿರ್ಮಿಸಿರುವ ಎಂಜಿಎಂ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ಜನರು ತೀವ್ರ ಅನಾನುಕೂಲ ಎದುರಿಸುವಂತಾಗಿದೆ. ನೂರಕ್ಕೂ ಹೆಚ್ಚು ಹಾಸಿಗೆಗಳಿರುವ ಈ ಆಸ್ಪತ್ರೆಯಲ್ಲಿ ಕೇವಲ ನಾಲ್ವರು ವೈದ್ಯರು ಇರುವುದರಿಂದ ರೋಗಿಗಳು ಸರತಿ ಸಾಲಿನಲ್ಲಿ ನಿಂತು ನಿತ್ರಾಣಗೊಳ್ಳುವಂತೆ ನಿಲ್ಲಬೇಕಾದ ಪರಿಸ್ಥತಿಯಾಗಿದೆ ಉಂಟಾಗಿದೆ.
ರೋಗಗಳಿಗೆ ತೊಂದರೆ: ಇಲ್ಲಿದ್ದ ಕೆಲವು ವೈದ್ಯರು ವರ್ಗಾವಣೆ ಪಡೆದು ಬೇರೆಡೆ ಹೋಗಿರುವುದರಿಂದ ರೋಗಿಗಳು ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿದರು.
ಸರ್ಕಾರ ಕೂಡಲೇ ಈ ಆಸ್ಪತ್ರೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೂ ವೈದ್ಯರನ್ನು ನೇಮಿಸಬೇಕು. ಸಮರ್ಪಕ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನೂ ಒದಗಿಸಿ ಈ ಭಾಗದ ಬಡರೋಗಿಗಳಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಬಿಳಗುಳ ಘಟಕದ ಅಧ್ಯಕ್ಷ ಆಸಿಫ್, ವಿಜಯ್‌ಕುಮಾರ್, ಸೈಮನ್ ಫರ್ನಾಂಡೀಸ್, ಸಿಪಿಐ ಕಾರ್ಯಕರ್ತ ಗಣೇಶ್ ಆಚಾರ್, ಭೋಜಭಂಡಾರಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement