ಶಿರವಾಸೆ ಗ್ರಾ.ಪಂ: ವಾರ್ಡ್ ಸಭೆ
ಚಿಕ್ಕಮಗಳೂರು: ಶಿರವಾಸೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಸಭೆ ಜು.11 ರಂದು ಸಿದ್ದಾಪುರ, ಕೊಂಕಳಮನೆ, ಕಳವಾಸೆ, ಗಾಳಿಗುಡ್ಡದಲ್ಲಿ ಹಾಗೂ 15 ರಂದು ಶಿರವಾಸೆಯಲ್ಲಿ ನಡೆಯಲಿದೆ. ಸಭೆಯಲ್ಲಿ ವಸತಿ ಯೋಜನೆಗೆ ಫಲಾನುಭವಿಗಳಿಂದ ಅರ್ಜಿ ಸ್ವೀಕಾರ, ಸ್ಥಳೀಯ ಅಭಿವೃದ್ಧಿಗಳ ಪ್ರಗತಿಯ ಬಗ್ಗೆ ಹಾಗೂ ಇತರೆ ವಿಚಾರಗಳನ್ನು ಚರ್ಚಿಲಾಗುವುದು. ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಲ್ಲಿ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ನಿವೃತ್ತ ಅಧಿಕಾರಿಗಳಾದ ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಕಂದಾಯ ಇಲಾಖೆಯ ವಿಶೇಷ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ತಹಸೀಲ್ದಾರ್, ಸಿವಿಲ್ ನ್ಯಾಯಾಧೀಶರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜು. 25 ಕೊನೆಯದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.