ಅರ್ಜಿ ಆಹ್ವಾನ
ಚಿಕ್ಕಮಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2013-14ನೇ ಸಾಲಿನಲ್ಲಿ ನಡೆದ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ ಪಡೆಯಲು ಶೇ.60 ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದ ಮಾಜಿ ಸೈನಿಕರ ಮಕ್ಕಳು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶ್ರೀ ವಾಸವಿ ನಿಲಯ ಶಂಕರೀಪುರಂ, 1 ನೇ ಕ್ರಾಸ್, ಬಿ.ಎಂ. ರಸ್ತೆ, ಹಾಸನ ಇವರಿಂದ ಅರ್ಜಿ ನಮೂನೆಗಳನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.
ಅವಧಿ ವಿಸ್ತರಣೆ
ಕುವೆಂಪು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಾಮಾನ್ಯ ಸ್ನಾತಕ ಪದವಿ ಕೋರ್ಸ್‌ಗಳ 2013-14 ನೇ ಶೈಕ್ಷಣಿಕ ಸಾಲಿಗೆ ತೃತೀಯ ಹಾಗೂ ಐದನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯಲು 100 ದಂಡ ಶುಲ್ಕದೊಂದಿಗೆ ಕೂನೆಯ ದಿನ ಜು.13. ಆದರೆ, ಸ್ನಾತಕ ಪದವಿಗಳ 1 ರಿಂದ 4 ರವರೆಗಿನ ಸೆಮಿಸ್ಟರ್ ಫಲಿತಾಂಶವು ಇನ್ನು ಪ್ರಕಟವಾಗದಿರುವುದರಿಂದ ತೃತೀಯ ಹಾಗೂ ಐದನೇ ಸೆಮಿಸ್ಟರ್‌ಗೆ ದಂಡ ಶುಲ್ಕ ರಹಿತವಾಗಿ ಪ್ರವೇಶ ಪಡೆಯಲು ಅವಧಿಯನ್ನು ಜುಲೈ 13 ರವರೆಗೆ ವಿಸ್ತರಿಸಲಾಗಿದೆ. ನಿಗದಿತ ಕೊನೆಯ ದಿನಾಂಕ ಮುಗಿದ ನಂತರ ವಿಶ್ವವಿದ್ಯಾನಿಲಯದ ಅನುಮತಿ ಪಡೆಯಲು ಸೂಚಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.