ನಾಳೆ ಉಚಿತ ಆರೋಗ್ಯ ತಪಾಸಣೆ
ಮೂಡಿಗೆರೆ: ರಾಷ್ಟ್ರೀಯ ಮಧುಮೇಹ, ಕ್ಯಾನ್ಸರ್, ಹೃದಯ ಸಂಬಂಧಿತ (ಸಿವಿಡಿ) ಹಾಗೂ ಪಾರ್ಶ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ತಜ್ಞ ವೈದ್ಯರಿಂದ ಉಚಿತ ಕ್ಯಾನ್ಸರ್ ರೋಗ ಪತ್ತೆ ಹಚ್ಚುವ ಹಾಗೂ ಸಲಹಾ ಶಿಬಿರವನ್ನು ಜು.11ರಂದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಶಿವಮೊಗ್ಗ, ಜೆಸಿ ಸಂಸ್ಥೆ, ಲಯನ್ ಸಂಸ್ಥೆ ಮತ್ತು ತಾಲೂಕು ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮೂಡಿಗೆರೆ ಪಟ್ಟಣದ ಮಹಾತ್ಮಗಾಂಧಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗೆ 10 ರಿಂದ ಮದ್ಯಾಹ್ನ 3 ಗಂಟೆವರೆಗೆ ಏರ್ಪಡಿಸಲಾಗಿದೆ ಎಂದು ಜೆಸಿಐ ಅಧ್ಯಕ್ಷ ಪ್ರಸನ್ನ ಗೌಡಹಳ್ಳಿ ತಿಳಿಸಿದ್ದಾರೆ.