ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತರೀಕೆರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Vishwanath S
Updated On : 14 Jul 2013, 12:44 pm

ಕ.ಪ್ರ.ವಾರ್ತೆ  ತರೀಕೆರೆ  ಜು.13 ತಾಲೂಕು ಆರೋಗ್ಯಾಧಿಕಾರಿಗಳು ತರೀಕೆರೆ ತಾಲೂಕು ವತಿಯಿಂದ ಶನಿವಾರ ಪಟ್ಟಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಏರ್ಪಡಿಸಲಾಗಿತ್ತು.
ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ಡೆಂಘೀ ವಿರೋಧಿ ಮಾಸಾಚರಣೆ ಜಾಥ ಉದ್ಘಾಟನೆ ನೆರವೇರಿಸಿ ಮಾತನಾಡಿ, ಜನಸಂಖ್ಯೆ ಹೆಚ್ಚಳದಿಂದ ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. ಜನಸಂಖ್ಯೆ ನಿಯಂತ್ರಿಸುವಲ್ಲಿ ಸಾರ್ವಜನಿಕರು ಸ್ಪಂದಿಸಬೇಕು ಎಂದು ತಿಳಿಸಿದರು.  
ರೋಟರಿ ಸಂಸ್ಥೆ ಅಧ್ಯಕ್ಷ ತಿಪ್ಪೇಶ್, ಸಹಾಯಕ ಜಿಲ್ಲಾ ರಾಜ್ಯಪಾಲ ಡಾ.ಜಿ.ಸಿ. ಶರತ್, ಡಾ. ರಾಜೇಶ್, ತಾಪಂ ಅಧ್ಯಕ್ಷೆ ಶಾಂತಾ ಗುರುಮೂರ್ತಿ, ಜಿಪಂ ಸದಸ್ತರಾದ ಹೇಮಾವತಿ ಕೃಷ್ಣಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್, ಪುರಸಭೆ ಮುಖ್ಯಾಧಿಕಾರಿ ಪಲ್ಲವಿ, ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ. ಮಲ್ಲಿಕಾರ್ಜುನ್, ಡಾ. ಪ್ರಸನ್ನ ಕುಮಾರ್ ಸಣ್ಣಕ್ಕಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
ಸಾಲುಮರದಮ್ಮನವರ ದೇವಸ್ಥಾನದಿಂದ ಬಾಲಕರ ಸರ್ಕಾರಿ ಪ.ಪೂ. ಕಾಲೇಜಿನವರೆಗೆ ವಿಶ್ವಜನಸಂಖ್ಯಾ ದಿನಾಚರಣೆ ಜಾಥ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement