ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಶ್ರೀನಿವಾಸ್
ಕ.ಪ್ರ.ವಾರ್ತೆ, ತರೀಕೆರೆ, ಜು.14
ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಮನವಿ ಮಾಡಿದರು.
ಅವರು, ಸಮೀಪದ ಬಳ್ಳಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ ಕಟ್ಟಡಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅಳರು, ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಲು ಅಗತ್ಯವಾಗಿರುವ ರಂಗಮಂದಿರ ನಿರ್ಮಾಣಕ್ಕೆ ಪ್ರಯತ್ನಿಸುವುದಾಗಿ ಅವರು ತಿಳಿಸಿದರು
ಜಿಲ್ಲಾ ಪಂಚಾಯತಿ ಸದಸ್ಯೆ ಹೇಮಾವತಿ ಕೃಷ್ಣಪ್ಪ, ತಾ.ಪಂ.ಮಾಜಿ ಸದಸ್ಯ ಕೃಷ್ಣಪ್ಪ, ಲಿಂಗದಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಯರಾಂ, ಪ್ರಕಾಶ್ ಮತ್ತಿತರರು ಮಾತನಾಡಿದರು.
ತಿಗಡ ಗ್ರಾ.ಪಂ.ಅಧ್ಯಕ್ಷೆ ಐಸಮ್ಮ, ಶಾಲೆ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲೆ ಮುಖ್ಯೋಪಾಧ್ಯಾಯರು, ಶಿಕ್ಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.