ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: 2012-13ನೇ ಸಾಲಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡೆ, ಸಂಸ್ಕೃತಿ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಸ್ವಯಂ ಸೇವಾ ಸಂಸ್ಥೆಗಳು, ರಾಷ್ಟ್ರೀಯ ಅಭಿವೃದ್ಧಿ ಮತ್ತು ಸಮಾಜ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿರುವ ಯುವಕ ಯುವತಿಯರಿಗೆ ಹಾಗೂ ನೋಂದಾಯಿತ ಯುವಕ, ಯುವತಿ ಮಂಡಳಿಗಳಿಂದ ರಾಷ್ಟ್ರೀಯ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜು.31 ಕೊನೆಯದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.