ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರೈತರಿಗೆ ಯಶಸ್ವಿನಿ ಯೋಜನೆ ಆಸರೆ

Lingaraj Badiger
Updated On : 16 Jul 2013, 10:51 am

ಚಿಕ್ಕಮಗಳೂರು: ಗ್ರಾಮೀಣ ಪ್ರದೇಶದ ರೈತರ ಸಹಕಾರಿಗಳಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ಅನಾರೋಗ್ಯ ಸಂದರ್ಭದಲ್ಲಿ ಯಶಸ್ವಿನಿ ಯೋಜನೆ ಆಸರೆಯಾಗಲಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಎ.ಆರ್. ರಾಜಶೇಖರ್ ಹೇಳಿದ್ದಾರೆ.
 ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಇಲಾಖೆಯಿಂದ ಆಯೋಜಿಸಿದ್ದ ಯಶಸ್ವಿನಿ ಯೋಜನೆಯ 2013-14ನೇ ಸಾಲಿನ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಶಸ್ವಿನಿ ಯೋಜನೆ ಗ್ರಾಮೀಣ ಪ್ರದೇಶದ ರೈತರಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ಅನಾರೋಗ್ಯ ಸಂದರ್ಭದಲ್ಲಿ ಆರ್ಥಿಕವಾಗಿ ಬಡತನ ರೇಖೆಗಿಂತ ಕಡಿಮೆಯಿರುವ ವರ್ಗಕ್ಕೆ ಹೆಚ್ಚು ಸಹಕಾರಿಯಾಗಲಿದೆ ಎಂದರು.
 ಈ ಯೋಜನೆ ವಿಶ್ವದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಅನುಷ್ಠಾನವಾಗಿ ಯಶಸ್ವಿಯಾಗಿದೆ. ಈ ಯೋಜನೆಯ ನೋಂದಣಿ ಫೆಬ್ರವರಿ ಮಾಹೆಯಲ್ಲಿ ಪ್ರಾರಂಭವಾಗಬೇಕಿತ್ತು. ಬದಲಾದ ಪರಿಸ್ಥಿತಿಯಿಂದಾಗಿ ಜು. 15 ರಿಂದ ಪ್ರಾರಂಭವಾಗಿ ಅಕ್ಟೋಬರ್  31 ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
 ಚಿಕ್ಕಾನವಂಗಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನಿಗಮದ ಅಧ್ಯಕ್ಷ ಶಿವಾನಂದಸ್ವಾಮಿ ಮಾತನಾಡಿ, ಈ ಯೋಜನೆಯ ಫಲ ನೇರವಾಗಿ ರೈತರಿಗೆ ದೊರಕಲು ಸಹಕಾರಿಯಾಗಬೇಕೆಂದರು. ಸಹಕಾರ ಸಂಘಗಳ ಉಪ ನಿಬಂಧಕ ಕೆ.ಎಂ. ಶಿವಕುಮಾರಸ್ವಾಮಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement