ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

27ರಿಂದ ಏಷ್ಯನ್ ಹುದ್ದೆಗಳ ತರಬೇತಿ

Lingaraj Badiger
Updated On : 17 Jul 2013, 11:01 am

ಚಿಕ್ಕಮಗಳೂರು: ಭಾರತೀಯ ವಾಯುಪಡೆಯಲ್ಲಿ ಏಷ್ಯನ್ ಹುದ್ದೆಗಳ ಪರೀಕ್ಷಾ ಪೂರ್ವ ತರಬೇತಿ ಜು.27ರಿಂದ 31ರ ವರೆಗೆ ಮಧ್ಯಾಹ್ನ 2.30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಪಿಯುಸಿಯಲ್ಲಿ ಶೇ.50 ಅಂಕ ಪಡೆದು ಉತ್ತೀರ್ಣರಾಗಿರುವ ಪುರುಷ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸಂಸದರ ಪ್ರವಾಸ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಜು.17ರಂದು ಆಲ್ದೂರು ವ್ಯಾಪ್ತಿಯ ಆವುತಿ, ಮಲ್ಲಂದೂರು ಮತ್ತು ಬಸರವಳ್ಳಿ ಗ್ರಾಮ ಹಾಗೂ 18 ರಂದು ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಯನ್ನು ವಿಚಾರಿಸಲಿದ್ದಾರೆ.
ಲೋಕಾಯುಕ್ತ ಅಧಿಕಾರಿ ಪ್ರವಾಸ
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಜು.17ರಂದು ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ. ಜು.17ರಂದು ಬೆಳಗ್ಗೆ 9 ಗಂಟೆಗೆ ತರೀಕೆರೆ ಪ್ರವಾಸಿ ಮಂದಿರ, ಮಧ್ಯಾಹ್ನ 2,30ಕ್ಕೆ ಕಡೂರು ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಆಯಾ ತಾಲೂಕಿನ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸಗಳ ನಿಮಿತ್ತ ಅರ್ಜಿ/ದೂರು ಸಲ್ಲಿಸಿದ್ದು, ತಮ್ಮ ದೂರನ್ನು ಸಂಬಂಧಪಟ್ಟ ಅಧಿಕಾರಿಯು ವಿಲೇವಾರಿ ಮಾಡದೆ, ಸಮಸ್ಯೆಯನ್ನು ಬಗೆಹರಿಸದೆ ಇದ್ದಲ್ಲಿ ದೂರು ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಥಿ ವೇತನಕ್ಕೆ ಬ್ಯಾಂಕ್ ಖಾತೆ ಕಡ್ಡಾಯ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ ಇತ್ಯಾದಿಗಳನ್ನು ಅರ್ಹತೆಯಾನುಸಾರ ಪಡೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳು, ಕಡ್ಡಾಯವಾಗಿ ಯಾವುದೇ ಶೆಡ್ಯೂಲ್ಡ್ ಬ್ಯಾಂಕ್‌ನಲ್ಲಿ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಬೇಕಾಗಿರುತ್ತದೆ. ಬ್ಯಾಂಕ್ ಖಾತೆ ತೆರೆಯದಿದ್ದಲ್ಲಿ ಅಂತಹವರಿಗೆ ಮೇಲಿನ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಗಮನಕ್ಕೆ ತರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
20ರಿಂದ ಖಾಸಗಿ ಬಸ್ ದರ ಹೆಚ್ಚಳ
ಶಿವಮೊಗ್ಗ: ಜು.20ರಿಂದ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗುವುದು ಎಂದು ಬಸ್ ಮಾಲೀಕರ ಸಂಘ ತಿಳಿಸಿದೆ. ಇತ್ತೀಚೆಗೆ ಇಂಧನ ದರ ಪದೇ ಪದೇ ಹೆಚ್ಚುತ್ತಿದ್ದು ಹಾಗೂ ನಿರ್ವಹಣ ವೆಚ್ಚ ಅಧಿಕಗೊಂಡಿದ್ದರಿಂದ ಅನಿವಾರ್ಯವಾಗಿ ಹೆಚ್ಚಿಸಬೇಕಾಗಿದೆ ಎಂದು ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement