ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

21 ರಿಂದ ಜಿಲ್ಲಾ ಗಮಕ ಕಲಾ ಸಮ್ಮೇಳನ

Lingaraj Badiger
Updated On : 18 Jul 2013, 10:58 am

ಕಪ್ರ ವಾರ್ತೆ ಚಿಕ್ಕಮಗಳೂರು  ಜು.17
ಮೂಡಿಗೆರೆ ತಾಲೂಕಿನ ಹೊರನಾಡಿನಲ್ಲಿ ಜು. 21 ರಿಂದ ಎರಡು ದಿನಗಳ ಕಾಲ ಜಿಲ್ಲಾ ಗಮಕ ಕಲಾ ಸಮ್ಮೇಳನ ನಡೆಯಲಿದೆ. ಹಿರಿಯ ಗಮಕಿ ಎಸ್.ಎಲ್. ರಾಧಾಕೃಷ್ಣ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
 ಜು. 21 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹೊರನಾಡಿನ ಶ್ರೀಕ್ಷೇತ್ರದ ಧರ್ಮಕರ್ತ ಡಾ. ಜಿ. ಭೀಮೇಶ್ವರ ಜೋಷಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
 ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಸಚಿವರಾದ ರಮಾನಾಥ ರೈ ಹಾಗೂ ಕಿಮ್ಮನೆ ರತ್ನಾಕರ, ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಬಿ.ಬಿ. ನಿಂಗಯ್ಯ ಅವರು ಶ್ರೀ ಕ್ಷೇತ್ರದ ವತಿಯಿಂದ ಮಾಡಲಾಗುತ್ತಿರುವ ತಟ್ಟೆ, ಲೋಟ, ಪುಸ್ತಕ ಹಾಗೂ ಸಸಿಗಳನ್ನು ವಿತರಣೆ ಮಾಡಲಿದ್ದಾರೆ. ಶಾಸಕ ಸಿ.ಟಿ. ರವಿ ಅವರು ಗಮಕ ವರ್ಷಿಣಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದರು.
ಪ್ರಥಮ ಗೋಷ್ಠಿ: ಮಧ್ಯಾಹ್ನ 2.30ಕ್ಕೆ ಆರಂಭಗೊಳ್ಳಲಿರುವ ಪ್ರಥಮ ಗೋಷ್ಠಿಯಲ್ಲಿ ಶಾಸಕ ವೈಎಸ್‌ವಿ ದತ್ತ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಕೆ. ಮಂಜಪ್ಪಯ್ಯ, ಕೆ.ಕೆ. ಬಾಲಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಎಸ್.ಎಲ್. ರಾಧಾಕೃಷ್ಣ ಅವರಿಂದ ಗಾಯನ, ರಾಮಸುಬ್ರಾಯ ಶೇಟ್ ಅವರಿಂದ ವ್ಯಾಖ್ಯಾನ ಕಾರ್ಯಕ್ರಮ ಜರುಗಲಿದೆ. ಎರಡನೇ ಗೋಷ್ಠಿಯಲ್ಲಿ ಡಾ. ಶ್ರೀರಾಮಶೇಷನ್ ಅಧ್ಯಕ್ಷತೆ ವಹಿಸಲಿದ್ದು, ಕವಿತಾ ಚಂದ್ರು, ಮಮ್ತಾಜ್ ಬೇಗಂ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ನಡೆಯಲಿರುವ ಗಮಕ ಗಾಯನ ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಪತ್ರಕರ್ತ ಜಿ.ವಿ. ಚೂಡಾನಾಥ ಅಯ್ಯರ್ ಅಧ್ಯಕ್ಷತೆ ವಹಿಸಲಿದ್ದಾರೆ.
 ಮೂರನೇ ಗೋಷ್ಠಿ ಗೌರಮ್ಮ ಬಸವೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪ್ರೇಮ ಹರಿಪೂಜಾರಿ, ಆಶಾಲತಾ ಡಿ. ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಂಜೆ 7.30ಕ್ಕೆ ಆದಿಶಂಕರಾಚಾರ್ಯರು ಕುರಿತ ನೃತ್ಯ ರೂಪಕ ಕಾರ್ಯಕ್ರಮ ಜರುಗಲಿದ್ದು, ಹಳೇಕೋಟೆ ರಮೇಶ್ ಅಧ್ಯಕ್ಷತೆ ವಹಿಸಲಿದ್ದು, ಎಚ್.ಎಸ್. ದಿವಾಕರ ರಾವ್, ಎಚ್.ಡಿ. ಜ್ವಾಲನಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
  ಜು. 22 ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿರುವ ನಾಲ್ಕನೇ ಗೋಷ್ಠಿಯಲ್ಲಿ ನರೇಂದ್ರ ಪೈ ಅಧ್ಯಕ್ಷತೆ ವಹಿಸಲಿದ್ದು, ಡಿ.ಎಚ್. ನಟರಾಜ್, ಎ.ವಿ. ಮಹಾಬಲೇಶ್ವರಶಾಸ್ತ್ರೀ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.  ಐದನೇ ಗೋಷ್ಠಿಯಲ್ಲಿ  ಪ್ರವೀಣ್ ದೇವಧರ್ ಅಧ್ಯಕ್ಷತೆ ವಹಿಸಲಿದ್ದಾರೆ.
 ಆರನೇ ಗೋಷ್ಠಿಯಲ್ಲಿ ಡಾ. ಸಿ.ಕೆ. ಸುಬ್ರಾಯ ಅಧ್ಯಕ್ಷತೆ ವಹಿಸಲಿದ್ದು, ಅಜಿತ್‌ಕುಮಾರ್, ಕೆ.ಆರ್. ಪ್ರಭಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಏಳನೇ ಗೋಷ್ಠಿಯಲ್ಲಿ ಕೆ. ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ರಾಮಸುಬ್ರಾಯಶೇಟ್, ನರೇಂದ್ರ ಪೈ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement