ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಮಸ್ಯೆ ಪರಿಹಾರಕ್ಕೆ ರಾಜ್ಯಪಾಲರಿಗೆ ಮನವಿ

Vishwanath S
Updated On : 21 Jul 2013, 1:28 am

ಚಿಕ್ಕಮಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜೆ.ಡಿ.ಎಸ್. ಮುಖಂಡ ಕೆ. ಭರತ್ ಅವರು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ. ಭರತ್, ಸ್ಥಳೀಯ ಸಂಸ್ಥೆ ಚುನಾವಣೆಗಳು ಪೂರ್ಣಗೊಂಡು 4 ತಿಂಗಳು ಕಳೆದರೂ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆ ಮಾಡುವಲ್ಲಿ ಸರ್ಕಾರ ಹಗ್ಗ ಜಗ್ಗಾಟ ನಡೆಸುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳ ನಿಯೋಜಿತ ಸದಸ್ಯರುಗಳು ತಮ್ಮ ವಾರ್ಡ್‌ಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.
ನಗರದೆಲ್ಲೆಡೆ ಕಸದ ರಾಶಿಗಳು ತುಂಬಿವೆ. ಚರಂಡಿಗಳು ಕೆಸರು ತುಂಬಿಕೊಂಡು ಚರಂಡಿಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಜನ ಸಾಮಾನ್ಯರು ಆರೋಗ್ಯ ಕಾಪಾಡಿಕೊಳ್ಳಲು ಹರಸಾಹಸ ಮಾಡುವಂತಾಗಿದೆ. ಡೆಂಘೀ, ಮಲೇರಿಯಾ, ಕಾಲರಾದಂತಹ ರೋಗಗಳು ಹರಡುವ ಭೀತಿ ಹೆಚ್ಚಾಗುತ್ತಿದೆ. ಗಂಡ ಹೆಂಡತಿಯ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಸರ್ಕಾರ ಮತ್ತು ಮೀಸಲಾತಿ ಗೊಂದಲದಲ್ಲಿ ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ. ಕೂಡಲೇ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಾಜಿದ್, ಸಚಿನ್, ವಿನಯ್, ದೀಪು, ಮಂಜು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement