ಸಿಎಂ ಪ್ರತಿಕೃತಿ ದಹನ
ಚಿಕ್ಕಮಗಳೂರು: ಆದಿಚುಂಚನಗಿರಿ ಮಠದ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ ಹಾಗೂ ವಿಧಾನಸೌಧದಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕಲಿಗರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ತಾಲೂಕಿನ ಕಡಬಗೆರೆಯಲ್ಲಿ ಭಾನುವಾರ ಮುಖ್ಯಮಂತ್ರಿಯವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರೇಮೇಶ್ ಅವರ ನೇತೃತ್ವದಲ್ಲಿ ಕಡಬಗೆರೆ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ದಹನ ಮಾಡಲಾಯಿತು.
ಪ್ರತಿಭಟನೆಯಲ್ಲಿ ತಾ.ಪಂ. ಮಾಜಿ ಉಪಾಧ್ಯಕ್ಷ ಯೋಗಾನಂದ್, ಬಿಜೆಪಿ ಕಾರ್ಯಕರ್ತರಾದ ಸುರೇಶ್, ಸಂದೇಶ್, ಶಿವು, ಚಂದ್ರು, ಅರವಿಂದ್ ಮತ್ತಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.