ಮೀನುಗಾರಿಕೆ ತರಬೇತಿ
ಮೀನುಗಾರಿಕೆ ಇಲಾಖೆ ವತಿಯಿಂದ ಒಳನಾಡು ಮೀನುಗಾರಿಕೆ ತರಬೇತಿ ನೀಡಲು ಅರ್ಹ ಗ್ರಾಮೀಣ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅವಧಿಯಲ್ಲಿ ಮೀನು ಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಣೆ, ಬಲೆ ಹೆಣೆಯುವುದು, ದುರಸ್ತಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ, ಪಾಲನೆ, ಇತ್ತೀಚಿನ ಬೆಳವಣಿಗೆಗಳು ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಮೀಪದ ಮೀನುಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
--