ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಳಪೆ ಕಾಮಗಾರಿನಡೆಸಿದ: ಗುತ್ತಿಗೆದಾರರು ಕಪ್ಪು ಪಟ್ಟಿಗೆ

Lingaraj Badiger
Updated On : 26 Jul 2013, 11:27 am

ಮೂಡಿಗೆರೆ: ಸರ್ಕಾರದ ಕಟ್ಟಡಗಳನ್ನು ಗುತ್ತಿಗೆದಾರರು ಬೇಕಾಬಿಟ್ಟಿ ನಿರ್ಮಿಸುತ್ತಿರುವುದರಿಂದಲೇ ಸರ್ಕಾರಿ ಶಾಲಾ ಕಾಲೇಜು ಹಾಗೂ ಕಚೇರಿಗಳು ಸೋರುತ್ತಿರುವುದು.
ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದರೊಂದಿಗೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ತಾ.ಪಂ.ಸದಸ್ಯರು ಜೆಡಿಎಸ್ ಮುಖಂಡ ರಂಜನ್ ಅಜಿತ್ ಕುಮಾರ್ ಒತ್ತಾಯಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಅವರ, ಛತ್ರಿ ಹಿಡಿದು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ನೋಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕೆಲವೇ ವರ್ಷಗಳಲ್ಲಿ ಕಟ್ಟಡ ಕುಸಿಯುವ ಹಂತವನ್ನು ತಲುಪಿದೆ. ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಭಯದಿಂದಲೇ ಪಾಠ ಕಲಿಯಬೇಕಾಗಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಕಂಪ್ಯೂಟರ್‌ಗಳ ಮೇಲೆ ಮಳೆ ನೀರು ಸೋರಿಕೆಯಿಂದ ಹಾಳಾಗುತ್ತಿದೆ. ಪಿಠೋಪಕರಣಗಳು ಹಾಳಾಗಿವೆ ಶಾಸಕ ಬಿ.ಬಿ. ನಿಂಗಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದು,  ಸರ್ಕಾರದೊಂದಿಗೆ ಮಾತುಕತೆ ನಡೆಸಿ ಕಳಪೆ ಕಾಮಗಾರಿ ಗುತ್ತಿಗೆದಾರನು ಕಪ್ಪು ಪಟ್ಟಿಗೆ ಶೇರಿಸುವಂತೆ ಒತ್ತಾಯಿಸಿರುವುದಾಗಿ ತಿಳಿಸಿದರು.
ತಾ.ಪಂ.ಸದಸ್ಯ ಎ.ಜೆ. ಸುಬ್ರಾಯ ಮಾತನಾಡಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement