ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿ ಸಂಘ, ಉದ್ಘಾಟನೆ

Lingaraj Badiger
Updated On : 27 Jul 2013, 11:03 am

ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಕಿಗ್ಗಾ ಶ್ರೀ ಅಭಿನವ ರಮಾನಂದ ಪ್ರೌಢ ಶಾಲಾವರಣದಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ, ಕೃಷಿಕ ಸಂಘಗಳ ಉದ್ಘಾಟನೆ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ತಾಲೂಕು ಶಿಕ್ಷಣ ಸಂಯೋಜನಾಧಿಕಾರಿ ರಶ್ಮಿ ಪ್ರಸನ್ನ ಕುಮಾರ್ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಿವೆ ಎಂದರು.
ಪ್ರಗತಿಪರ ಕೃಷಿಕ ಮೇಲ್ಗಟ್ಟ ವೆಂಕಟೇಶ್ ಆಚಾರ್‌ಕೃಷಿಕ ಸಂಘವನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಕೃಷಿ ದೇಶದ ಬೆನ್ನುಲುಬು. ಇತ್ತಿಚಿನ ದಿನಗಳಲ್ಲಿ ಯುವಜನಾಂಗ ಕೃಷಿಯ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದೆ. ಎಂದರು.
 ಸಂದರ್ಭದಲ್ಲಿ ಕಳೆದ ಬಾರಿಯ ಎಸ್‌ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ರಂಗನಾಥ್ ಪುಟಪರ್ತಿ ಅಭಿನಂದಿಸಿದರು. ರವೀಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement