ನದಿ ಪಾತ್ರದ ಜನರಿಗೆ ಎಚ್ಚರಿಕೆ
ತರೀಕೆರೆ: ಭದ್ರಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ಈಗಿನ ಜಲಾಶಯದ ನೀರಿನ ಮಟ್ಟ 178.7 ತಲುಪಿರುತ್ತದೆ.
ಒಳ ಹರಿವಿನ ಪ್ರಮಾಣ 32,010 ಕ್ಯುಸಂಕ್ಸ್ ಇದ್ದು, ಇದೇ ರೀತಿ ಮುಂದುವರಿದಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 186 ಗೆ ಅತಿ ಶೀಘ್ರವಾಗಿ ತಲುಪುವ ನಿರೀಕ್ಷೆ ಇದೆ. ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡಲಾಗುವುದು ಎಂದು ತರೀಕೆರೆ ತಹಶೀಲ್ದಾರ್ ರಂಜಿತ ತಿಳಿಸಿದ್ದಾರೆ.
ಆದ್ದರಿಂದ ಭದ್ರಾ ನದಿ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅವರು ಕೋರಿದ್ದಾರೆ. ಹಾಗೂ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದು ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಅವರು ಕೋರಿದ್ದಾರೆ.