ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಭೂ ಕುಸಿತ ಪ್ರದೇಶಕ್ಕೆ ತಹಸೀಲ್ದಾರ್ ಭೇಟಿ

Mainashree
Updated On : 28 Jul 2013, 12:01 pm

ಬಾಳೆಹೊನ್ನೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಜಯಪುರ- ಬಸರೀಕಟ್ಟೆ ಸಂಪರ್ಕ ಕಲ್ಪಿಸುವ ಚೆನ್ನೇಕಲ್ಲು ಎಂಬಲ್ಲಿ ರಸ್ತೆ ಕುಸಿದ ಪ್ರದೇಶಕ್ಕೆ ಕೊಪ್ಪ ತಹಶೀಲ್ದಾರ್ ಶ್ರೀಧರಮೂರ್ತಿ  ಎಸ್. ಪಂಡಿತ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಚೆನ್ನೇಕಲ್ಲು ಪ್ರದೇಶದಲ್ಲಿ ಭೂ ಕುಸಿತದಿಂದಾಗಿ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ, ರಸ್ತೆ ವಿಸ್ತರಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು. ರಸ್ತೆಗೆ ಪೂರಕವಾಗೊ ಸ್ವಲ್ಪ ಹೆಚ್ಚುವರಿ ಜಾಗವನ್ನು ಬಿಟ್ಟುಕೊಡುವ ಬಗ್ಗೆ ಮೇಲ್ಭಾಗದಲ್ಲಿನ ಖಾಸಗಿ ಕಾಫಿ ತೋಟದ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸಿದರು.
ಪರಿಹಾರ ನೀಡಿಲ್ಲ: ಭೂ ಕುಸಿತದ ಪರಿಣಾಮ ಸಮೀಪದಲ್ಲಿನ ಲಕ್ಷ್ಮೀನಾರಾಯಣ ಎಂಬುವವರಿಗೆ ಸೇರಿದ ಸುಮಾರು ಒಂದು ಎಕರೆ ಜಮೀನಿನಲ್ಲಿ ಬೆಳೆ ಹಾಳಾದ ಕಾರಣ ಸೂಕ್ತ ಪರಿಹಾರ ಒದಗಿಸುವಂತೆ 2009ರಲ್ಲೇ ಅವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಇದೂವರೆಗೂ ಸರ್ಕಾರ ಯಾವುದೇ ಪರಿಹಾರ ನೀಡದಿರುವ ಬಗ್ಗೆ ಅವರು ತಹಶೀಲ್ದಾರ್ ಅವರ ಗಮನಕ್ಕೆ ತಂದರು.
ಸಮೀಪದ ಬಿಳಾಲುಕೊಪ್ಪದಿಂದ ಸುಮಾರು 70 ವಿದ್ಯಾರ್ಥಿಗಳು ಪ್ರತಿದಿನ ಬಸರೀಕಟ್ಟೆಗೆ ಕಾಲ್ನಡಿಗೆಯಲ್ಲಿ ಶಾಲೆಗೆ ಬರುತ್ತಿದ್ದು, ಅವರಿಗೆ ವಾಹನ ಸೌಕರ್ಯ ಕಲ್ಪಿಸುವಂತೆ ಬಸರೀಕಟ್ಟೆ ಪ್ರೌಢಶಾಲೆಯ ಶಿಕ್ಷಕ ವರ್ಗ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement