ಡಿ.ಇಡಿ. ದಾಖಲಾತಿಗೆ ಅವಧಿ ವಿಸ್ತರಣೆ
ಚಿಕ್ಕಮಗಳೂರು: ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇಡಿ. ದಾಖಲಾತಿಗೆ ನಿಗಧಿಪಡಿಸಲಾಗಿದ್ದ ಕೊನೆಯ ದಿನವನ್ನು ಜು. 31 ರವರೆಗೆ ವಿಸ್ತರಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸದೇ ಡಯಟ್ನಲ್ಲಿ ನೋಂದಣಿ ಮಾಡಿಸಿದ ಅಭ್ಯರ್ಥಿಗಳು ಜು. 30 ಮತ್ತು 31 ರಂದು ನಡೆಯಲಿರುವ ಕೌನ್ಸಿಲಿಂಗ್ನಲ್ಲಿ ಮೂಲ ದಾಖಲೆಗಳನ್ನು ಹಾಜರುಪಡಿಸಿ ದಾಖಲಾತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ ಪ್ರಾಂಶುಪಾಲರು, ಡಯಟ್ ಹಾಗೂ ಉಪ ನಿರ್ದೇಶಕರು (ಅಭಿವೃದ್ಧಿ), ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.