ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ನರಸಿಂಹರಾಜಪುರ: ತಾಲೂಕು ಜೆಡಿಎಸ್ ಮಾಜಿ ಅಧ್ಯಕ್ಷ ಎಂ.ಆರ್. ರವಿಶಂಕರ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಕೊಪ್ಪದಲ್ಲಿ ನಡೆದ ಕಾಂಗ್ರೆಸ್ ಶೃಂಗೇರಿ ಕ್ಷೇತ್ರ ಮಟ್ಟದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ವೀಕ್ಷಕರ ಸಮ್ಮುಖದಲ್ಲಿ ಎಂ.ಆರ್. ರವಿಶಂಕರ್, ತಾಲೂಕಿನ ನಾಗಲಾಪುರ ಗ್ರಾಪಂ ಮಾಜಿ ಅಧ್ಯಕ್ಷ ಸೈಯದ್ ಫಾರೂಕ್, ಕೆ.ವಿ. ಜಯಕರ, ಜೆಡಿಎಸ್ ತಾಲೂಕು ಕಾರ್ಯದರ್ಶಿ ಎಚ್.ಎನ್. ರವಿಶಂಕರ್, ಕಾರ್ತಿಕ್, ಗೋಪಿ, ಸಂದೇಶ್ ಮತ್ತಿತರರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.