ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಹನುಮ ಜಯಂತಿ ಆಚರಣೆ

Lingaraj Badiger
Updated On : 4 Jun 2013, 11:07 am

ತರೀಕೆರೆ: ಬ್ರಾಹ್ಮಣ ಸೇವಾ ಸಮಿತಿಯಿಂದ ಸೋಮವಾರ ಪಟ್ಟಣದ ಇತಿಹಾಸ ಪ್ರಸಿದ್ಧ ನೀರುಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ದೇವಸ್ಥಾನದಲ್ಲಿ ಭಜನಾ ಮಂಡಳಿ ವತಿಯಿಂದ ವಿಶೇಷ  ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸ್ವಾಮಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಿತು. ಅರ್ಚಕ ಶಶಿ ಅವರು ಸ್ವಾಮಿಗೆ ನಿರ್ವಹಿಸಿದ್ದ ವಿಶೇಷ ಅಲಂಕಾರ ಎಲ್ಲರ ಮೆಚ್ಚುಗೆ ಗಳಿಸಿತು. ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಎ.ವಿ. ನಾಗಭೂಷಣ್, ಸಮಿತಿ ಸದಸ್ಯರು, ಭಜನಾ ಮಂಡಳಿ ಸದಸ್ಯೆಯರು, ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement