13ರಂದು ಜಿಪಂ ಸಾಮಾನ್ಯ ಸಭೆ
ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯು ಜೂ. 13 ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜೆ.ಎಸ್. ರೇಖಾ ಹುಲಿಯಪ್ಪಗೌಡ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅರ್ಜಿ ಆಹ್ವಾನ
ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ತಾಲೂಕು ಮಟ್ಟದ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಗೌರವ ಸೇವೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಹ ವಿಕಲಚೇತನರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ. 14 ಕೊನೆಯ ದಿನವಾಗಿದೆ. ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಥವಾ ಸಿಇಒ, ತಾಲೂಕು ಪಂಚಾಯಿತಿ ಅಥವಾ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
--