ಇಂದು ಉರೂಸ್
ನರಸಿಂಹರಾಜಪುರ: ಇಲ್ಲಿನ ಪ್ರವಾಸಿ ಮಂದಿರದ ಸಮೀಪದ ದರ್ಗಾ ಹಜ್ರತ್ ಸೈಯ್ಯದ್ ಹಯಾತ್ ಷಾ ವಲಿ ಅವರ 124 ನೇ ಉರೂಸ್ ಸಂದಲ್ ಉತ್ಸವ 10 ರಂದು ನಡೆಯಲಿದೆ. ಸೋಮವಾರ ಸಂಜೆ 4 ಗಂಟೆಗೆ ಹಜರತ್ ಷಾ ವಲಿ ಅವರ ಅಲೈ ಗಂಧೋತ್ಸವ ನಡೆಯಲಿದೆ. ರಾತ್ರಿ 7 ಗಂಟೆಗೆ ಧಾರ್ಮಿಕ ಗುರುಗಳಿಂದ ಪ್ರವಚನ, ದರ್ಗಾ ಸಮಿತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ 10 ಗಂಟೆಗೆ ಕವಾಲಿ ಕಾರ್ಯಕ್ರಮ ನಡೆಯಲಿದೆ.
ಸಹಾಯವಾಣಿ
ಚಿಕ್ಕಮಗಳೂರು: ನಗರ ವ್ಯಾಪ್ತಿಗೆ ಸಂಬಂಧಿಸಿದ ಸ್ವಚ್ಛತೆ, ರಸ್ತೆ ಅತಿಕ್ರಮಣ, ಚರಂಡಿ ಶುಚಿತ್ವ, ಬೀದಿದೀಪ, ಒಳಚರಂಡಿ ವ್ಯವಸ್ಥೆ ಹಾಗೂ ಇತರೆ ದೂರುಗಳನ್ನು ಸಾರ್ವಜನಿಕರು ನಗರಸಭೆ ಕುಂದುಕೊರತೆ ವಿಭಾಗದ ದೂರವಾಣಿ ಸಂಖ್ಯೆ- 232222 ಕ್ಕೆ ಕರೆ ಮಾಡಿ ದೂರು ನೀಡಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಲು ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಆಹ್ವಾನ
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆನ್ ಲೈನ್ ಮೂಲಕ ಕೋರಿಕೆ ಅಥವಾ ಪರಸ್ಪರ ವರ್ಗಾವಣೆಗೆ ಶಿಕ್ಷರಿಂದ ಅರ್ಜಿ ಆಹ್ವಾನಿಸಲಾಗಿದೆ. ವರ್ಗಾವಣೆ ಬಯಸುವ ಅರ್ಹ ಶಿಕ್ಷಕರು ವರ್ಗಾವಣೆಗೆ ನಿರ್ಧಿಷ್ಟ ಪಡಿಸಿರುವ ಅರ್ಜಿ ನಮೂನೆಯಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಟಪಾಲು ಅಥವಾ ಮುದ್ದಾಂ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ಜೂ. 6 ರಿಂದ 12 ರೊಳಗೆ ಸಲ್ಲಿಸಲು ಅವಕಾಶವಿದ್ದು, ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.