ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆ ಉಚಿತ ಆರೋಗ್ಯ ಶಿಬಿರ

Lingaraj Badiger
Updated On : 10 Jun 2013, 11:22 am

ಶೃಂಗೇರಿ: ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಸುವರ್ಣ ಆರೋಗ್ಯ  ಸುರಕ್ಷಾ ಟ್ರಸ್ಟ್ ಸಹಯೋಗದಲ್ಲಿ ಜೂ. 11 ರ ಮಂಗಳವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಉಚಿತ ಹೃದಯ ರೋಗ, ನರರೋಗ, ಮೂತ್ರ ಪಿಂಡದ ಕಲ್ಲು ತಪಾಸಣಾ ಶಿಬಿರ ನಡೆಯಲಿದೆ. ಶಿಬಿರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ  2 ಗಂಟೆಯವರೆಗೆ ನಡೆಯಲಿದೆ. ವಿವಿಧ ತಜ್ಞ ವೈದ್ಯರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರ ಈ ಶಿಬಿರ ಸದುಪಯೋಗಪಡೆದುಕೊಳ್ಳಬಹುದಾಗಿದೆ.
ಅರ್ಜಿ ಆಹ್ವಾನ
ಕಡೂರು: ತಾಲೂಕಿನಲ್ಲಿ ವಾಸವಿರುವ (ಅಭ್ಯಾಸ ಮಾಡಿದ ಸ್ಥಳ ಯಾವುದಾದರೂ ಪರಿಗಣಿಸಬಹುದು) 2012-13 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಭರತನಾಟ್ಯ ಮತ್ತು ಶಾಸ್ತ್ರೀಯ ಸಂಗೀತದಲ್ಲಿ ವ್ಯಾಸಾಂಗ ಮಾಡಿ ಉತ್ತೀರ್ಣರಾದ ತ್ರಿ ಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು ಜೂನ್ 30 ರೊಳಗೆ ಜನಾರ್ಧನ ಅಯ್ಯಂಗಾರ್, ಭಾರತೀಯ ಜೀವ ವಿಮಾ ನಿಗಮ, ಕಡೂರು ಇವರಿಗೆ ಅರ್ಜಿಗಳನ್ನು ಕಳುಹಿಸಿ ಕೊಡಲು ಕೋರಲಾಗಿದೆ.
ಆಯನೂರು ಆರೋಪ ಸತ್ಯಕ್ಕೆ ದೂರವಾದುದು
ಶಿವಮೊಗ್ಗ: ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ವೈಖರಿಯ ಬಗ್ಗೆ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸದಲ್ಲಿ ನಿರತರಾಗಿದ್ದು, ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೆ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸೇವಾದಳ ಸಮನ್ವಯ ಸಮಿತಿಯ ಸದಸ್ಯರ ವೈ.ಎಚ್. ನಾಗರಾಜ್ ಟೀಕಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ ಹಲವು ಜನಪರ ಯೋಜನೆ ಜಾರಿಗೊಳಿಸಿದ್ದಾರೆ. ಈ ಮೂಲಕ ತಮ್ಮ ಆಡಳಿತ ವೈಖರಿ ಏನೆಂಬುವುದನ್ನು ಸಾಬೀತುಪಡಿಸಿದ್ದಾರೆ. ಆದರೆ, ದುರಾಡಳಿತ, ಭ್ರಷ್ಟಾಚಾರ, ಹಗರಣಗಳಿಂದ ರಾಜ್ಯದ ಜನತೆಯಿಂದ ತಿರಸ್ಕೃತವಾಗಿರುವ ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯರ ಜನಪರ ಆಡಳಿತ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಾಗರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.  ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್ ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement