ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

19 ರಂದು ಪ್ರಗತಿ ಪರಿಶೀಲನಾ ಸಭೆ

Lingaraj Badiger
Updated On : 11 Jun 2013, 11:11 am

ಚಿಕ್ಕಮಗಳೂರು: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ 19 ರಂದು ಬೆಳಿಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಮೀನುಗಾರಿಕೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪಡಿತರ ಬಿಡುಗಡೆ
ಜೂನ್ ಮಾಹೆಗೆ ಜಿಲ್ಲೆಯ ಎ.ಎ.ವೈ ಪಡಿತರ ಚೀಟಿದಾರರಿಗೆ  29 ಕೆ.ಜಿ ಅಕ್ಕಿ, 6 ಕೆ.ಜಿ ಗೋಧಿ, ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 4 ರಿಂದ 15 ಕೆ.ಜಿ. ಅಕ್ಕಿ, 1 ರಿಂದ 3 ಕೆ.ಜಿ. ಗೋಧಿ, ಹಾಗೂ ಕರ್ನಾಟಕ ಅಗ್ನಿ ಶಾಮಕ ತುರ್ತು ಸೇವೆಗಳ ಇಲಾಖೆ ಹಾಗೂ ಗೃಹ ರಕ್ಷಕ ಸಿಬ್ಬಂದಿಗೆ 15 ಕೆ.ಜಿ ಅಕ್ಕಿ ಹಾಗೂ 3 ಕೆ.ಜಿ. ಗೋಧಿ ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯ ಗ್ಯಾಸ್ ರಹಿತ ಪಡಿತರ ಚೀಟಿ ಹೊಂದಿದ ಪಟ್ಟಣ ಪ್ರದೇಶದವರಿಗೆ 6 ಲೀಟರ್ ಮತ್ತು ಅನೌಪಚಾರಿಕ ಪಡಿತರ ಪ್ರದೇಶದವರಿಗೆ 6 ಲೀ. ಹಾಗೂ ಗ್ರಾಮಾಂತರ ಪ್ರದೇಶದವರಿಗೆ 4 ಲೀಟರ್‌ನಂತೆ ಸೀಮೆ ಎಣ್ಣೆ ಬಿಡುಗಡೆ ಮಾಡಲಾಗಿದೆ. ಸಂಬಂಧಪಟ್ಟ ನ್ಯಾಯ ಬೆಲೆ ಅಂಗಡಿಯಿಂದ ತಿಂಗಳ ಒಳಗೆ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜನಸ್ಪಂದನ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಮತ್ತು ತಾಪಂ ಸಹಯೋಗದೊಂದಿಗೆ ಚಿಕ್ಕಮಗಳೂರು ತಾಲೂಕು ಅಂಬಳೆ ಹೋಬಳಿ, ಅಂಬಳೆ ಗ್ರಾಪಂ ವ್ಯಾಪ್ತಿಯ ಬೀರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಶಾಸಕ ಮೂಡಿಗೆರೆ ಬಿ.ಬಿ. ನಿಂಗಯ್ಯ ಅಧ್ಯಕ್ಷತೆಯಲ್ಲಿ 12 ರಂದು ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement