ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರಕ್ತದಾನ ಮಾದರಿ ಕಾರ್ಯಕ್ರಮ

Lingaraj Badiger
Updated On : 11 Jun 2013, 11:10 am

ಕ.ಪ್ರ.ವಾರ್ತೆ ಚಿಕ್ಕಮಗಳೂರು ಜೂ.10
ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಹುಟ್ಟುಹಬ್ಬವನ್ನು ಕರವೇ ಕಾರ್ಯಕರ್ತರು ನಗರದಲ್ಲಿ ಸೋಮವಾರ ಆಚರಿಸಿದರು.
ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ನೇತೃತ್ವದಲ್ಲಿ ಎಂ.ಜಿ. ರಸ್ತೆಯ ಶ್ರೀ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಿದರು. ಜನ್ಮದಿನದ ಪ್ರಯುಕ್ತ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಮಾದರಿ ಕಾರ್ಯಕ್ರಮ: ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ರಕ್ಷಣಾ ವೇದಿಕೆಯ ಕಾರ್ಯಕರ್ತರು ತಮ್ಮ ರಾಜ್ಯಾಧ್ಯಕ್ಷರ ಹುಟ್ಟುಹಬ್ಬವನ್ನು ರಕ್ತದಾನ ಮಾಡುವ ಮೂಲಕ ಆಚರಿಸುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ವಾರ್ತಾಧಿಕಾರಿ ಖಾದರ್ ಶಾ ಮಾತನಾಡಿ, ರಕ್ತದಾನ ಮಾಡುವಂತಹ ಕಾರ್ಯಕ್ರಮಗಳ ಸಂಖ್ಯೆ ಸಮಾಜದಲ್ಲಿ ಹೆಚ್ಚಾಗಬೇಕು ಎಂದು ಕರೆ ನೀಡಿದರು.
ಹಿರಿಯ ಪತ್ರಕರ್ತ ಬಿ. ತಿಪ್ಪೇರುದ್ರಪ್ಪ ಮಾತನಾಡಿ, ದೇಶವನ್ನು ಕಾಯುವಂತಹ ರಕ್ಷಣಾ ಪಡೆಯಂತೆ ರಾಜ್ಯದ ಹಿತ ಕಾಯುವ ಕೆಲಸವನ್ನು ಕರವೇ ಮಾಡುತ್ತಿದೆ. ನಾಡಿನ ನೆಲ, ಜಲ, ಭಾಷೆ ಕುರಿತಂತೆ ಕರವೇ ಕಾರ್ಯನೋಮ್ಮುಖವಾಗಿರುವುದು ಶ್ಲಾಘನೀಯವಾದುದು ಎಂದುತಿಳಿಸಿದರು.
ರಾಜ್ಯದ್ಯಂತ ರಕ್ತದಾನ: ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ, ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡರ ಅಪೇಕ್ಷೆಯಂತೆ ಇಂದು ರಾಜ್ಯಾದ್ಯಂತ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ. ಶಿವದತ್ ಮಾತನಾಡಿ, ಎಲ್ಲಾ ದಾನಗಳಿಗಿಂತ ರಕ್ತದಾನ ಬಹಳ ಮುಖ್ಯವಾದುದು, ಇದು, ಮರು ಜೀವ ಕೊಡುವ ಕೆಲಸ ಮಾಡಲಿದೆ ಎಂದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ. ಸುಂದರೇಗೌಡ, ವೇದಿಕೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕ ಪರಮೇಶ್, ಪ್ರಧಾನ ಕಾರ್ಯದರ್ಶಿ ನಂದಿನಿ ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಕಾರ್ಯದರ್ಶಿ ಪಂಚಾಕ್ಷರಿ, ಸಂಘಟನಾ ಕಾರ್ಯದರ್ಶಿ ಕೋಟೆ ಮಲ್ಲೇಶ್, ತಾಲೂಕು ಅಧ್ಯಕ್ಷ ಸತೀಶ್ ರಾಜ್ ಅರಸ್, ನಗರಾಧ್ಯಕ್ಷ ವಿನೋಕುಮಾರ್, ಉಪಾಧ್ಯಕ್ಷ ಇರ್ಷಾದ್ ಅಹ್ಮದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement