ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿಕಲಚೇತನರಿಂದ ಅರ್ಜಿ ಆಹ್ವಾನ

Lingaraj Badiger
Updated On : 11 Jun 2013, 11:17 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಜೂ.10
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಉದ್ಯೋಗಸ್ಥ ವಿಕಲಚೇತನ ಮಹಿಳೆಯರು, 5ನೇ ತರಗತಿ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಟೈಲರಿಂಗ್, ಟೈಪಿಂಗ್, ಕಂಪ್ಯೂಟರ್ ಇತ್ಯಾದಿ ವೃತ್ತಿ ತರಬೇತಿ ಪಡೆಯುತ್ತಿರುವ ವಿಕಲಚೇತನ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿನಿಯರಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಮಾಹಿತಿಗಾಗಿ ಉದ್ಯೋಗಸ್ಥರ ಅಂಗವಿಕಲರ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯ, ಬಿಎಸ್‌ಎನ್‌ಎಲ್, ಕಚೇರಿ ಹಿಂಭಾಗ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಶೃಂಗೇರಿಯಲ್ಲಿ ಸಾಧಾರಣ ಮಳೆ
ಶೃಂಗೇರಿ: ತಾಲೂಕಿನ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆ ಬಿದ್ದಿದೆ.
ಭಾನುವಾರ ಬಿಸಿಲಿನ ವಾತಾವರಣವಿತ್ತು. ಸೋಮವಾರ ಮಧ್ಯಾಹ್ನ ದವರೆಗೆ ಬಿಸಿಲು, ತುಂತುರು ಮಳೆಯ ವಾತಾವರಣವಿದ್ದು ಸಂಜೆ ಸಾಧಾರಣ ಮಳೆಯಾಗಿದೆ. ಈಗಾಗಲೇ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಬತ್ತ ನಾಟಿಗೆ ಸಸಿಮುಡಿ ಕೆಲಸ ಆರಂಭವಾಗಿದ್ದ ಅಗತ್ಯ ಮಳೆಯ ಅವಶ್ಯಕತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement