ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ
ಮೂಡಿಗೆರೆ: ಪಟ್ಟಣದ ಕೆ.ಎಂ. ರಸ್ತೆ ಅಗಲೀಕರಣ ಮಾಡಲು ಅಧಿಕಾರಿಗಳು ಹಾಗೂ ರಾಜಕಾರಣಿಗಳು ಮೀನಾ ಮೇಷ ಏಣಿಸುತ್ತಿದ್ದು. ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಸಾರ್ವಜನಿಕರೊಂದಿಗೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಪಟ್ಟಣ ಹೋರಾಟ ಸಮಿತಿಯ ಅಧ್ಯಕ್ಷ ರವಿಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಕೆ.ಎಂ. ರಸ್ತೆ ಬಹಳ ಇಕ್ಕಟ್ಟಿನಿಂದ ಕೂಡಿದ್ದಾಗಿದ್ದು. ಮತ್ತು ಕೆಲವು ಜನ ಪ್ರತಿನಿಧಿಗಳು ಚರಂಡಿಯ ಮೇಲೆ ಮನೆಗಳನ್ನು ನಿರ್ಮಿಸಿಕೊಂಡು ಆರ್ಸಿಸಿಯ ನೀರನ್ನು ರಸ್ತೆಗೆ ಬಿಡುವುದರ ಮೂಲಕ ಸಾರ್ವಜನಿಕರಿಗೆ ಉಪದ್ರ ನೀಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಕೆ.ಎಂ.ರಸ್ತೆ ಅಗಲೀಕರಣದ ವಿಚಾರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತುರ್ತುಸಭೆ ನಡೆಸಿ. ರಸ್ತೆಯ ಮಧ್ಯದಿಂದ 45, 45, 90 ಅಡಿಗೆ ಅಗಲೀಕರಣ ಮಾಡುವುದಾಗಿ ನಿರ್ಣಯ ಕೈಗೊಂಡಿದ್ದರು. ಆದರೆ ನಿರ್ಣಯ ನಿರ್ಣಯವಾಗಿಯೇ ಉಳಿದಿದ್ದು ಕಾರ್ಯ ರೂಪಕ್ಕೆ ಬಂದಿಲ್ಲ.
ನೂತನ ಶಾಸಕ ಬಿ.ಬಿ. ನಿಂಗಯ್ಯ ಅವರು ರಸ್ತೆ ಅಗಲೀ ಕರಣದ ಬಗ್ಗೆ ಹೆಚ್ಚು ಒತ್ತು ನೀಡುತ್ತಿಲ್ಲ ಎಂದು ಆರೋಪಿಸಿದರು.