ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆ ಉಚಿತ ತಪಾಸಣಾ ಶಿಬಿರ

Lingaraj Badiger
Updated On : 13 Jun 2013, 10:40 am

ನರಸಿಂಹರಾಜಪುರ, ಜೂ.12 ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ  ಸಂಯುಕ್ತ ಆಶ್ರಯದಲ್ಲಿ ಹೃದಯ, ನರರೋಗ, ಮೂತ್ರಪಿಂಡದ ಕಲ್ಲಿನ ಉಚಿತ ತಪಾಸಣಾ ಶಿಬಿರವು ಜೂನ್ 14 ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಸಪ್ತಗಿರಿ ಆಸ್ಪತ್ರೆ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪ್ರಕಟಣೆ ತಿಳಿಸಿದೆ. ಬಿ.ಪಿ.ಎಲ್. ಕಾರ್ಡುದಾರರಿಗೆ, ಅಂತ್ಯೋದಯ, ಅಕ್ಷಯ ಅನಿಲ ರಹಿತ ರೇಷನ್ ಕಾರ್ಡುದಾರರಿಗೆ ಉಚಿತವಾಗಿ ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆ ನೀಡಲಾಗುತ್ತದೆ. ಯಶಸ್ವಿನಿ ಕಾರ್ಡು ಹೊಂದಿರುವವರಿಗೆ ರಿಯಾಯ್ತಿ ದರದಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ.
1 ನೇ ತರಗತಿಯಿಂದ 10ನೇ ತರಗತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಹೃದಯ ಸಮಸ್ಯೆ ಕಂಡುಬಂದಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ  ದೂರವಾಣಿ- 080- 28393392, ಮೊ. 9886691344 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement