ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪೋಷಕರಲ್ಲಿ ಕಾನೂನು ಅರಿವು ಮೂಡಿಸಿ

Lingaraj Badiger
Updated On : 14 Jun 2013, 10:43 am

ಕ.ಪ್ರ. ವಾರ್ತೆ  ಮೂಡಿಗೆರೆ  ಜೂ.13
ಮಕ್ಕಳಿಗಾಗಿ ಸಂವಿಧಾನವು ವಿವಿಧ ಹಕ್ಕುಗಳನ್ನು ಮಾಡಿದ್ದು, ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಂಡು ಶಿಕ್ಷಣದಿಂದ ವಂಚಿತರನ್ನಾಗಿಸುವುದು ಅಪರಾಧ. ಈ ಬಗ್ಗೆ ಪೋಷಕರಲ್ಲಿ ಅರಿವನ್ನುಂಟುಮಾಡುವುದು ಅತ್ಯಗತ್ಯವಾಗಿದೆ ಎಂದು ಮೂಡಿಗೆರೆ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾ. ಪದ್ಮಪ್ರಸಾದ್ ತಿಳಿಸಿದರು.
ಪಟ್ಟಣದ ಸೈಂಟ್ ಮಾರ್ಥಾಸ್ ಶಾಲೆಯಲ್ಲಿ ಗುರುವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಕೀಲರ ಸಂಘ ಹಾಗೂ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಎಚ್ಚರ ವಹಿಸಿ: ರಾಜ್ಯದ ಎಲ್ಲಾ ಸಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಿ ಯಾವುದೇ ಉದ್ದಿಮೆಗಳಲ್ಲಿ ಬಾಲಕಾರ್ಮಿಕರನ್ನು ನೇಮಿಸಿಕೊಂಡರೆ ಅದು ಕಾನೂನಿನ ರೀತಿ ಅಪರಾಧವಾಗುತ್ತದೆ. ಮಕ್ಕಳು ಬಾಲಕಾರ್ಮಿಕ ಪರಿಸ್ಥಿತಿಗೆ ಒಳಗಾಗದಂತೆ ಸಮಾಜ ಎಚ್ಚರ ವಹಿಸಬೇಕು ಎಂದು ಹೇಳಿದರು.
ಜ್ಞಾನವಂತರಾಗಿ ಸಾಧನೆ ಮಾಡುವತ್ತ ದಾರಿತೋರಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪ್ರೇರಣೆ ನೀಡಬೇಕೆ ಹೊರತು ಮಕ್ಕಳು ದುಡಿಯುವ ಕಾರ್ಮಿಕರಾಗಿ ಬದುಕುವ ಪರಿಸ್ಥಿತಿಗೆ ಒಳಗಾಗಬಾರದು ಎಂದರು.
ತಹಸೀಲ್ದಾರ್ ಎ.ವಿ. ರುದ್ರಪ್ಪಾಜಿರಾವ್ ಮಾತನಾಡಿ, ಮಕ್ಕಳು ಉತ್ತಮ ಪ್ರಜೆಗಳಾಗಿ ಮಾರ್ಪಾಡುವಂತೆ ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ತಂದೆ ತಾಯಿಗಳು ತಮ್ಮ ಮಕ್ಕಳನ್ನು ಭವಿಷ್ಯದ ಹಿತದೃಷ್ಟಿಯಿಂದ ವಿದ್ಯಾಭ್ಯಾಸಕ್ಕೆ ಕಳುಹಿಸಿ, ಸತ್ಪ್ರಜೆಯಾಗಿ ರೂಪುಗೊಳ್ಳಲು ಅವಕಾಶ ನೀಡಬೇಕು. ಇದರಿಂದ ಬಾಲಕಾರ್ಮಿಕ ಪದ್ಧತಿಯನ್ನು ತೊಲಗಿಸಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್. ಕೋಮಾರಯ್ಯ ಮಾತನಾಡಿ, ಕಾರ್ಮಿಕ ಕ್ಷೇತ್ರ, ಉದ್ಯೋಗ, ವ್ಯಾಪಾರ, ಕೃಷಿ ಇತ್ಯಾದಿ ಎಲ್ಲ ಕ್ಷೇತ್ರದಲ್ಲೂ ವಯೋವುತಿಗೆ ತಕ್ಕಂತೆ ಕೆಲಸ ಮಾಡಬೇಕೆಂಬ ನಿಯಮವಿದ್ದರೂ ದೇಶದೆಲ್ಲೆಡೆ ಬಾಲಕಾರ್ಮಿಕರು ಕಾಣಿಸಿಕೊಳ್ಳುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.   
ವಕೀಲ ಎಂ.ವಿ. ಜಯರಾಜ್ ಬಾಲಕಾರ್ಮಿಕತೆ ಮತ್ತು ಕಾನೂನು ಬಗ್ಗೆ ಉಪನ್ಯಾಸ ನೀಡಿದರು. ಸಹಾಯಕ ಕಾರ್ಮಿಕ ಆಯುಕ್ತೆ ಶ್ರೀವಳ್ಳಿ ಎ.ಜೆ. ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಕಾರ್ಯದರ್ಶಿ ಬಿ.ಟಿ. ನಟರಾಜ್, ಎಚ್.ಎಂ. ಉಮೇಶ್, ಸೈಂಟ್ ಮಾರ್ಥಾಸ್ ಶಿಕ್ಷಣ ಸಂಸ್ಥೆ ಮುಖ್ಯಶಿಕ್ಷಕಿ ಸಿಸ್ಟರ್, ಹಿರಿಯ ಕಾರ್ಮಿಕ ನಿರೀಕ್ಷಕ ಮಹದೇವಪ್ಪ ಮತ್ತಿತರರು ಈ ಸಂದರ್ಭದಲ್ಲಿ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement