ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸೂಕ್ತ ರಕ್ಷಣೆ ನೀಡಲು ಒತ್ತಾಯ

Lingaraj Badiger
Updated On : 15 Jun 2013, 10:44 am

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜು ಮತ್ತು ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಹೋಗಿ ಬರುವ ಸಮಯದಲ್ಲಿ ಬೀದಿಯಲ್ಲಿ ತೊಂದರೆಯಾಗುತ್ತಿರುವುದರಿಂದ ಪೋಲಿಸರು ಸೂಕ್ತ ರಕ್ಷಣೆ ನೀಡಬೇಕೆಂದು ಕವಾಲಿ ಸೋಮಶೇಖರ್ ಒತ್ತಾಯಿಸಿದ್ದಾರೆ. ಪ್ರತಿನಿತ್ಯ ಕಾಲೇಜು ಮತ್ತು ಪ್ರೌಢಶಾಲೆ ತರಗತಿ ಪ್ರಾರಂಭವಾದಾಗ ಮತ್ತು  ಶಾಲೆ ಕಾಲೇಜು, ಬಿಡುವಾಗ ಹೆಣ್ಣುಮಕ್ಕಳಿಗೆ ಬೀದಿಯಲ್ಲಿ ರಕ್ಷಣೆ ನೀಡಲು ಸೂಕ್ತ ಸ್ಥಳಗಳಲ್ಲಿ ಪೊಲೀಸರನ್ನು ನೇಮಕ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಜಿಪಂ ಸಾಮಾನ್ಯ ಸಭೆ
ಶಿವಮೊಗ್ಗ: ಜೂನ್ 19ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲಲ್ನಜೀರ್‌ಸಾಬಬ್ಸಭಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಲಿದೆ. ಸದಸ್ಯರು ಸಕಾಲಕ್ಕೆ ಆಗಮಿಸಿ, ಕಲಾಪದಲ್ಲಿ ಭಾಗವಹಿಸುವಂತೆ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement