ಅರ್ಜಿ ಆಹ್ವಾನ
ಚಿಕ್ಕಮಗಳೂರು: ಭಾರತಿಯ ಭೂಸೇನಾ ವತಿಯಿಂದ ಸೋಲ್ಜರ್ ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರಿಕಲ್, ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಭರ್ತಿ ರ್ಯಾಲಿ ಜುಲೈ 3 ರಿಂದ 10ರವರೆಗೆ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ.
23 ವರ್ಷ ವಯಸ್ಸಿನೊಳಗಿನ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 40 ರಿಂದ 50 ಅಂಕ ಪಡೆದ ಹಾಗೂ ಟ್ರೇಡ್ಮೆನ್ ಹುದ್ದೆಗೆ 8ನೇ ತರಗತಿ ಉತ್ತೀರ್ಣರಾಗಿರುವವರು ಭಾಗವಹಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಹಾಸನ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ತರಬೇತಿ ಸದುಪಯೋಗವಾಗಲಿ
ಶೃಂಗೇರಿ: ಸರ್ಕಾರದ ವತಿಯಿಂದ ನಡೆಯುವ ತರಬೇತಿ ಕಾರ್ಯಾಗಾರಗಳಲ್ಲಿ ಪಾಲ್ಗೊಂಡು ಅದನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಪಂ ಮಾಜಿ ಉಪಾಧ್ಯಕ್ಷ ನೂತನ್ ನೂತನ್ ಕುಮಾರ್ ತಿಳಿಸಿದರು. ಅವರು ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಪಂ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗೆ ವಿವಿಧ ಯೋಜನೆಗಳ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ತರಬೇತಿ ಕಾರ್ಯಾಗಾರಗಳಲ್ಲಿ ಪಡೆಯುವ ಸಲಹೆ, ಸೂಚನೆಗಳನ್ನು ಪಾಲಿಸಿ, ಅದನ್ನು ಅಳವಡಿಸಿಕೊಳ್ಳಬೇಕು. ಸರ್ಕಾರ ಈಗಾಗಲೇ ಹಿಂದುಳಿದ ವರ್ಗಗಳಿಗೆ ಉಚಿತ ತರಬೇತಿ, ಉದ್ಯೋಗ, ಅಲ್ಲದೇ ಕೈಮಗ್ಗ ಸೇರಿದಂತೆ ಉದ್ಯೋಗ ಕೇಂದ್ರ ತೆರೆದಿದೆ. ಜನರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೋಹನ್, ತಾಪಂ ಸದಸ್ಯೆ ಶಶಿಕಲಾ ಮೊದಲಾದವರು ಉಪಸ್ಥಿತರಿದ್ದರು.
ಬಾಲ ಕಾರ್ಮಿಕ ಪದ್ಧಿತಿ ವಿರೋಧಿ ದಿನಾಚರಣೆ
ತರೀಕೆರೆ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ವಿಕಸನ ಸಂಸ್ಥೆ, ಕಾರ್ಮಿಕ ಇಲಾಖೆ ವತಿಯಿಂದ ಶನಿವಾರ ನ್ಯಾಯಾಲಯದ ಮುಂಭಾಗದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧಿತಿ ವಿರೋಧಿ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು.
ತರೀಕೆರೆ ಹಿರಿಯ ಸಿವಿಲ್ ನ್ಯಾ. ಹಿದಾಯತ್ ಉಲ್ಲಾ ಷರೀಫ್, ಕಿರಿಯ ಸಿವಿಲ್ ನ್ಯಾ. ಜಯಲಕ್ಷ್ಮಿ, ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಶಿವಪ್ರಸಾದ್, ಎಪಿಪಿ ಭಾಸ್ಕರ್, ಡಿವೈಎಸ್ಪಿ ಸದಾನಂದ ಬಿ. ನಾಯಕ್, ಡಾ. ಪ್ರಸನ್ನಕುಮಾರ್ ಸಣ್ಣಕ್ಕಿ, ವಕೀಲರು, ಶಾಲಾ ಮಕ್ಕಳು ಸಮಾರಂಭದಲ್ಲಿ ಭಾಗವಹಿಸಿದ್ದರು. ನಂತರ ಜಾಥಾ ಏರ್ಪಡಿಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.