ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಡಮಕ್ಕಳಿಗೆ ಪ್ರೋತ್ಸಾಹ ಅಗತ್ಯ

Lingaraj Badiger
Updated On : 17 Jun 2013, 10:54 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜೂ.15
ಮಕ್ಕಳ ಹುಟ್ಟು ಹಬ್ಬ, ಮದುವೆ ದಿನಗಳ ಆಚರಣೆ ಮತ್ತು ಪುಣ್ಯಸ್ಮರಣೆ ಕಾರ್ಯಕ್ಕಮದಲ್ಲಿ ಬಡಮಕ್ಕಳನ್ನು ಗುರುತಿಸಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಿದರೆ ಜನ್ಮ ಸಾರ್ಥಕವಾಗುತ್ತದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದ್ದಾರೆ.
ಅವರು ತಮ್ಮ ತಾಯಿಯ 6ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ಬಸವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.
ಸಹಾಯ ಅಗತ್ಯ: ದೇಶದಲ್ಲಿ ಅದೆಷ್ಟೋ ವಿದ್ಯಾವಂತ ಬಡ ಮಕ್ಕಳು ಆರ್ಥಿಕವಾಗಿ ಹಿಂದುಳಿದು ಶಿಕ್ಷಣ ವಂಚಿತರಾಗಿ ದಾರಿ ಕಾಣದಂತವರಾಗಿದ್ದಾರೆ. ಅಂತಹ ಮಕ್ಕಳ ಭವಿಷ್ಯ ಉಜ್ವಲವಾಗಲು ನಮ್ಮ ಕೈಲಾದ ಮಟ್ಟಿಗೆ ಸಹಾಯಮಾಡುವ ಅವಶ್ಯಕತೆ ಇದೆ ಎಂದರು.
ಇಂದಿನ ಜೀವನದಲ್ಲಿ ಅದೆಷ್ಟೋ ಮಂದಿ ವಿವಿಧ ಕಾರ್ಯಕ್ರಮಗಳ ಹೆಸರಿನಲ್ಲಿ ದುಂದುವೆಚ್ಚ ಮಾಡುವುದನ್ನು ನೋಡಿದ್ದೇವೆ. ಅನವಶ್ಯಕವಾಗಿ ಹಣ ದುರುಪಯೋಗ ಮಾಡುವುದಕ್ಕಿಂತ ಅಂಗವಿಕಲ, ಅಂಧರು, ವೃದ್ಧರಿಗೆ ಸಹಾಯ ಹಸ್ತ ನೀಡಿ ಅಥವಾ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾದರೆ ದೇಶಕ್ಕೆ ನಮ್ಮ ಅಲ್ಪಕೊಡುಗೆ ನೀಡಿದ ತೃಪ್ತಿ ಸಿಗುತ್ತದೆ ಎಂದು ಹೇಳಿದರು.
ಪ್ರಾಂಶುಪಾಲರಾದ ಸುಮಿತ್ರ, ಉಪಪಾಂಶುಪಾಲರಾದ ಸುಮಿತ್ರಮ್ಮ, ಶಿಕ್ಷಕ ಸುಶೀಲ್ ನಾಯಕ್, ಸತ್ಯನಾರಾಯಣ್, ಶ್ರೀಲಕ್ಷ್ಮಿ, ಭೋಜಾಚಾರ್, ಶಕುಂತಲಾ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement