ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ದರ ಏರಿಕೆಗೆ ಬಿಜೆಪಿ ಖಂಡನೆ

Lingaraj Badiger
Updated On : 18 Jun 2013, 11:23 am

ಶೃಂಗೇರಿ ಕೇಂದ್ರ ಸರ್ಕಾರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನು ಹಾಗೂ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಸಿರುವುದನ್ನು ತಾಲೂಕು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ತಾಲೂಕು ಬಿಜೆಪಿ ಅಧ್ಯಕ್ಷ ಎಸ್.ಎಸ್. ನಯನ ಕೇಂದ್ರ ಸರ್ಕಾರದ ಬೆಲೆಯೇರಿಕೆ ನೀತಿ ಖಂಡನೀಯ. ಪದೇ, ಪದೇ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ಸೀಮೇಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇದು ಕೇಂದ್ರದ ಜನ ವಿರೋಧಿ ನೀತಿಯಾಗಿದೆ ಎಂದರು.
ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಜನರ ಮೇಲೆ ಹೊರೆಯಾಗಿದೆ. ಜನಸಾಮಾನ್ಯರು ಓಡಾಡಲು ಕಷ್ಟವಾಗಿದೆ. ಅತ್ತ ಕೇಂದ್ರ ಸರ್ಕಾರ, ಇತ್ತ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ಮಾಡುವುದರ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಕೂಡಲೇ ಕೇಂದ್ರ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ಕ್ರಮ ಹಿಂತೆಗೆದುಕೊಳ್ಳಬೇಕೆಂದು ತಮ್ಮ ಹೇಳಿಕೆಯಲ್ಲಿ ನಯನ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಆಧಾರ್ ಕಾರ್ಡ್ ಕಡ್ಡಾಯ
ನರಸಿಂಹರಾಜಪುರ: ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಪ.ಜಾತಿ ಮತ್ತು ಪ.ವರ್ಗದ ಪ್ರೌಢ ಶಾಲೆ ಮತ್ತು ಕಾಲೇಜು ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಹಾಗೂ ವೈಯ್ಯಕ್ತಿಕ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
20013- 14 ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಸಲ್ಲಿಸುವಾಗ ಆಧಾರ ಕಾರ್ಡ್ ಹಾಗೂ ಬ್ಯಾಂಕ್ ಖಾತೆಗಳ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕಾಗುತ್ತದೆ. ರಾಷ್ಟೀಕೃತ ಬ್ಯಾಂಕ್‌ಗಳಲ್ಲೇ ವೈಯ್ಯಕ್ತಿಕ ಖಾತೆ ತೆರೆಯಬೇಕಾಗುತ್ತದೆ.
ರಕ್ತದಾನ ಮಾಡಿ
ನರಸಿಂಹರಾಜಪುರ: 18 ವರ್ಷ ತುಂಬಿದ ಆರೋಗ್ಯವಂತರಾದ ಯಾರು ಬೇಕಾದರೂ ರಕ್ತದಾನ ಮಾಡಬಹುದಾಗಿದೆ ಎಂದು ನರ್ಸಸ್‌ಲೈನ್ಸ್ ಸಂಸ್ಥೆಯ ಅಧ್ಯಕ್ಷ ಮುಲ್ಲ ಪಳ್ಳಿ ತಿಳಿಸಿದರು.
ಅವರು ಜೀವನ್‌ಜ್ಯೋತಿ ಪ್ರೌಢ ಶಾಲೆಯಲ್ಲಿ ನರ್ಸಸ್‌ಲೈನ್ ಸಂಸ್ಥೆ ಹಾಗೂ ಜೀವನ್‌ಜ್ಯೋತಿ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ರಕ್ತದಾನದ ಮಹತ್ವ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. ಆರೋಗ್ಯವಂತ ಮನುಷ್ಯರು ಪ್ರತಿ 3 ತಿಂಗಳಿಗೊಮ್ಮೆ ರಕ್ತದಾನ ನೀಡಬಹುದು. ದಾನಿಗಳು ನೀಡಿದ ರಕ್ತದಿಂದ ರೋಗಿಗಳ ಜೀವ ಉಳಿಯಲಿದೆ ಎಂದರು. ಸಭೆಯಲ್ಲಿ ನರ್ಸಸ್‌ಲೈನ್ ಸಂಸ್ಥೆಯ ಪದಾಧಿಕಾರಿಗಳಾದ ಬಿನು, ಕಿರಣ್, ಚೇತನ್, ಶಾಲೆಯ ಪ್ರಾಂಶುಪಾಲ ಪೀಟರ್ ಬಾಬು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement