ಜು. 22 ರಂದು ಚುನಾವಣೆ
ಕಡೂರು: ಬರುವ ಜುಲೈ 22 ರಂದು ಕಡೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಯೋಜನಾ ಘಟಕದ ಕಾರ್ಯಕಾರಿ ಸಮಿತಿಯ ಚುನಾವಣೆ ನಡೆಯಲಿದೆ.
ಈ ಕುರಿತು ಕಡೂರು ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷ ಚನ್ನಪ್ಪ ಇಂಗ್ಲಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ವೈ.ಎಂ.ತಿಪ್ಪೇಶ್ ಪತ್ರಿಕಾ ಹೇಳಿಕೆ ನೀಡಿದ್ದು, ಕಡೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಯೋಜನಾ ಘಟಕದ ಕಾರ್ಯಕಾರಿ ಸಮಿತಿಯ ಚುನಾವಣೆಯು ಪ್ರಕ್ರಿಯೆಯು ಜುಲೈ 11 ರಿಂದ ಆರಂಭವಾಗಲಿದೆ. ಜುಲೈ 22 ರಂದು ಚುನಾವಣೆ ನಡೆಯಲಿರುವುದರಿಂದ ಸದರಿ ಚುನಾವಣೆಯಲ್ಲಿ ಮತ ಚಲಾಯಿಸಲು ಮತ್ತು ಸ್ಫರ್ಧಿಸಲು ರಾಜ್ಯ ಸರ್ಕಾರಿ ನೌಕರರು ರು. 100 ಸದಸ್ಯತ್ವ ಶುಲ್ಕ ಪಾವತಿಸಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದೆಂದು ಹೇಳಿದ್ದಾರೆ.
ರು. 100 ಪಾವತಿಸಿ: ಜೂನ್ 25 ರ ಒಳಗಾಗಿ ಸಂಘಕ್ಕೆ ಸದಸ್ಯತ್ವ ಶುಲ್ಕ ರೂ 100ನ್ನು ಪಾವತಿಸಿ ಇಲಾಖಾವಾರು ಮತದಾರರ ಪಟ್ಟಿಯನ್ನು ಸಂಘದಿಂದ ಅನುಮೋದನೆಯನ್ನು ಪಡೆಯಬೇಕಾಗಿರುತ್ತದೆ. ಸದಸ್ಯತ್ವದ ಶುಲ್ಕ ಪಾವತಿಸದೇ ಇರುವ ನೌಕರರು ಚುನಾವಣೆಯಲ್ಲಿ ಮತ ಚಲಾಯಿಸುವ ಮತ್ತು ಸ್ಪರ್ಧಿಸುವ ಅರ್ಹತೆಯನ್ನು ಹೊಂದಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷರು ಹಾಗು ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದಾಗಿರುತ್ತದೆ. ಮಾಹಿತಿಗೆ 9448025755 ಮತ್ತು 9449412994 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: 2013-14ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹಾಗೂ ವಿದ್ಯಾರ್ಥಿ ವೇತನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆ ಹೊಂದಿರಬೇಕು.ರಾಷ್ಟ್ರೀಕೃತ ಬ್ಯಾಂಕಿನ ಉಳಿತಾಯ ಖಾತೆಯ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ೆ ಕಡ್ಡಾಯವಾಗಿ ಸಲ್ಲಿಸಬೇಕು.